ಮುಖ್ಯ ಸುದ್ದಿ
ಆಡಳಿತ ನ್ಯಾಯಾಧೀಕರಣ ತರಬೇತಿ | ಅರ್ಜಿ ಆಹ್ವಾನ
CHITRADURGA NEWS | 15 JUNE 2024
ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ದೇವರ ಎತ್ತುಗಳ ನಿರ್ವಹಣೆಗೆ ಟ್ರಸ್ಟ್ ರಚಿಸಲು ಪ್ರೇರೇಪಿಸಿ | ADC ಕುಮಾರಸ್ವಾಮಿ
ಜೂನ್ 18 ರಿಂದ ಜುಲೈ 31 ರವರೆಗೆ ವೆಬ್‍ಸೈಟ್ tw.kar.nic.in ನಲ್ಲಿ ಅರ್ಜಿ ಸಲ್ಲಿಸಿ, ಸಲ್ಲಿಸಿರುವ ಅರ್ಜಿಗಳನ್ನು ಚಿತ್ರದುರ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಚೇರಿಗೆ ಜುಲೈ 31ರ ಸಂಜೆ 5.30ರೊಳಗೆ ಸಲ್ಲಿಸಬೇಕು.
ಷರತ್ತುಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ ಪತ್ರ ಸಲ್ಲಿಸಬೇಕು ಹಾಗೂ ತರಬೇತಿಯನ್ನು ಜಿಲ್ಲೆಯಲ್ಲಿಯೇ ಪಡೆಯಬೇಕು.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಮಗ ಪೊಲೀಸ್ ವಶಕ್ಕೆ | ತಂದೆ ಲೋ ಬಿಪಿಯಿಂದ ಸಾವು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರದ ಆದೇಶದಂತೆ ಶಿಷ್ಯ ವೇತನವನ್ನು ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು.
ತರಬೇತಿಯ ಅವಧಿ 02 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10ರಷ್ಟು ರೂಗಳ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಿ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು.
ಇದನ್ನೂ ಓದಿ: 30 ಸಾವಿರದವರೆಗೆ ಉಚಿತ ಚಿಕಿತ್ಸೆ | ಹೆದ್ದಾರಿ ಪ್ರಯಾಣಿಕರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನೆರವು
ಈ ನಿಯಮ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ ಶೇ.10%ರೂಗಳ ಬಡ್ಡಿಯಲ್ಲಿ ಸರ್ಕಾರಕ್ಕೆ ಹಿಂತಿರುಗಿಸಿ ಕಟ್ಟಬೇಕು ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳು ನಿಗಧಿತ ದಿನಾಂಕದೊಳಗೆ ಹಾಜರಾಗದಿದ್ದರೆ ಅಂತಹವರ ಆಯ್ಕೆಯನ್ನು ರದ್ದು ಪಡಿಸಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಪರಿಶಿಷ್ಠ ವರ್ಗದ ಕಾನೂನು ಪದವಿಧರರ ವಾರ್ಷಿಕ ವರಮಾನದ ಮೊತ್ತ 2,50,000/- ಒಳಗಡೆ ಇರಬೇಕು.
ಇದನ್ನೂ ಓದಿ: ಚಿನ್ನದ ಸರ ಕಳೆದುಕೊಂಡ ಮಹಿಳೆ | ಪ್ರಾಮಾಣಿಕತೆ ಮೆರೆದ ಮಠದ ಸಿಬ್ಬಂದಿ
ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು, ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.