CHITRADURGA NEWS | 16 APRIL 2025
ಚಿತ್ರದುರ್ಗ: ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕಾಯುತ್ತಿದ್ದ ಸಾವಿರಾರು ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.
ಹೊಸ ಶಿಕ್ಷಣ ನೀತಿ ಅನ್ವಯ 2025ನೇ ಸಾಲಿನಿಂದ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಜೂನ್ 1 ಕ್ಕೆ ಕಡ್ಡಾಯವಾಗಿ 6 ವರ್ಷ ಆಗಿರಬೇಕಿತ್ತು.
ಇದನ್ನೂ ಓದಿ: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)
ಜೂನ್ 1ಕ್ಕೆ ಒಂದು ದಿನ ಕಡಿಮೆ ಇದ್ದರೂ ದಾಖಲಾತಿ ಮಾಡಿಕೊಳ್ಳಲು ಅವಕಾಶ ಇರಲಿಲ್ಲ. ಇದರಿಂದ ಸಾಕಷ್ಟು ಪೋಷಕರು ಆತಂಕಕ್ಕೇ ಈಡಾಗಿದ್ದರು.
ಆದರೆ, ಇಂದು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ನಿರ್ಧಾರ ಪ್ರಕಟಿಸಿದ್ದಾರೆ.

5 ವರ್ಷ ತಿಂಗಳಿಗೆ 1ನೇ ತರಗತಿ ದಾಖಲು:
ಹೊಸ ನಿಯಮದ ಅನ್ವಯ 5 ವರ್ಷ 5 ತಿಂಗಳಿಗೆ 1ನೇ ತರಗತಿಗೆ ದಾಖಲು ಮಾಡಿಕೊಳ್ಳಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ಇದನ್ನೂ ಓದಿ: ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ
ಹಲವು ಪೋಷಕರು ಸರ್ಕಾರ, ಶಿಕ್ಷಣ ಇಲಾಖೆಯ ಮೇಲೆ ಮಕ್ಕಳ ಭವಿಷ್ಯದ ಹಿನ್ನೆಲೆಯಲ್ಲಿ ಒತ್ತಡ ಹಾಕಿದ್ದರು.
ಇದರಿಂದ ಎಚ್ಚೆತ್ತ ಶಿಕ್ಷಣ ಇಲಾಖೆ ವಯೋಮಿತಿ ಸಡಿಲಿಕೆ ಮಾಡಿದ್ದು, 6 ವರ್ಷಕ್ಕೆ ಬದಲಾಗಿ 5 ವರ್ಷ 5 ತಿಂಗಳು ಪೂರ್ಣಗೊಂಡಿದ್ದರೂ ಮಕ್ಕಳನ್ನು 1ನೇ ತರಗತಿಗೆ ದಾಖಲು ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ಖಾಸಗಿ ಶಾಲೆ ಬಸ್ ನಿರ್ವಾಹಕಿ ಕೊಲೆ | ಆರೋಪಿ ಬಂಧನ
ಈ ನಿಯಮ ಈ ವರ್ಷಕ್ಕೆ ಮಾತ್ರ ನಿಗಧಿಯಾಗಿದ್ದು, ಯುಕೆಜಿ ಅಧ್ಯಯನ ಮಾಡಿರುವ ಮಕ್ಕಳಿಗೆ ಮಾತ್ರ 1ನೇ ತರಗತಿಗೆ ಸೇರಿಸಲು ಅವಕಾಶ ಕಲ್ಪಿಸಿದೆ. ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯದ ನಿಯಮ ಇರುತ್ತದೆ. ಆದರೆ, ಪೋಷಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕಿ ಯಂತ್ರದಂತೆ ಓದಿಸಬೇಡಿ. ವಯಸ್ಸಿನ ಬಗ್ಗೆ ಅತಿಯಾಗಿ ತಲೆಕೆಡಿಸಿಕೊಳ್ಳಬೇಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
