
CHITRADURGA NEWS | 19 APRIL 2024
ಚಿತ್ರದುರ್ಗ: ವಾಣಿವಿಲಾಸ ಸಾಗರದಿಂದ ಹೊಳಲ್ಕೆರೆ ತಾಲೂಕಿಗೆ ಸರಬರಾಜಾಗುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪ್ರಗತಿಯನ್ನು ಆರ್‍ಡಿಪಿಆರ್ ಇಲಾಖೆ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಪರಿಶೀಲನೆ ನಡೆಸಿದರು.
ವಾಣಿವಿಲಾಸ ಸಾಗರದಿಂದ ಹಿರಿಯೂರು ತಾಲೂಕಿನ ಐಮಂಗಲ ಹಾಗೂ ಹೊಳಲ್ಕೆರೆ ತಾಲೂಕಿಗೆ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಇದನ್ನೂ ಓದಿ: ಮೂರು ದಿನ ‘ಮಳೆರಾಯನ ಜಿಲ್ಲಾ ಪ್ರವಾಸ’ | ಹರ್ಷ ಮೂಡಿಸುವ ಮುನ್ಸೂಚನೆ ನೀಡಿದ ವರುಣ ದೇವ
ಜಾಕ್‍ವೆಲ್ ಪಾಯಿಂಟ್, ಎಂ.ಎಸ್. ಪೈಪ್ ಸ್ಟಾಕ್ ಯಾರ್ಡ್‍ಗೆ ಭೇಟಿ ನೀಡಿದ ಅವರು ಹೊಳಲ್ಕೆರೆ ತಾಲೂಕಿನ ಹಾಲೇನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ನೀರು ಶುದ್ಧೀಕರಣ ಘಟಕ ಹಾಗೂ ಚೌಡಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಯನ್ನು ವೀಕ್ಷಿಸಿದರು.
ಇದೇ ವೇಳೆ ಸ್ವಚ್ಛಭಾರತ ಮಿಷನ್ ಯೋಜನೆಯ ಮಲ ನಿರ್ವಹಣೆ ಘಟಕ ಮತ್ತು ಘನ ತ್ಯಾಜ್ಯ ನಿರ್ವಹಣೆ ಘಟಕಗಳ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಭರ್ಜರಿ ಜಿಗಿತ | ಒಂದೇ ದಿನ 1500 ರೂ. ಹೆಚ್ಚಳ
ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ ಸೇರಿಂದತೆ ಮತ್ತಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
