CHITRADURGA NEWS | 29 OCTOBER 2026
ಚಿತ್ರದುರ್ಗ: ಭಾರತೀಯ ಸೇನೆಯ ವತಿಯಿಂದ ಚಿತ್ರದುರ್ಗ ನಗರದ ಒನಕೆ ಒಬವ್ವ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿಯು ಅಕ್ಟೋಬರ್ 31 ರಿಂದ ನವೆಂಬರ್ 03ರವರೆಗೆ ನಡೆಯಲಿದ್ದು ಅಭ್ಯರ್ಥಿಗಳಿಗೆ ಪಾಲಿಸಬೇಕಾದ ಸೂಚನೆಗಳ ಬಗ್ಗೆ ನೇಮಕಾತಿ ರ‍್ಯಾಲಿಯ ಹೊಣೆ ಹೊತ್ತಿರುವ ಕರ್ನಲ್ ಪುಷ್ಪರಾಜ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿಧಾನ ಪರಿಷತ್‌ನ ನಾಲ್ಕೂ ಸ್ಥಾನಗಳಲ್ಲಿ ಎನ್‌ಡಿಎಗೆ ಭರ್ಜರಿ ಜಯ | ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ
ಅಗ್ನಿವೀರ್ ಸಾಮಾನ್ಯ ಕರ್ತವ್ಯ, ತಾಂತ್ರಿಕ ಹಾಗೂ ಟ್ರೇಡ್ಸ್ ವರ್ಗಗಳ ಹುದ್ದೆಗೆಳ ನೇಮಕಾತಿ ರ‍್ಯಾಲಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಹಾಸನ, ಕೊಡಗು, ವಿಜಯನಗರ ಹಾಗೂ ಚಿತ್ರದುರ್ಗ ಸೇರಿದಂತೆ ಒಟ್ಟು 14 ಜಿಲ್ಲೆಗಳಿಂದ 957 ಅಭ್ಯರ್ಥಿಗಳು ರಾಲ್ಯಿಯಲ್ಲಿ ಭಾಗವಹಿಸಲಿದ್ದಾರೆ. ಅ.31 ರಂದು 543 ಹಾಗೂ ನ.1 ರಂದು 414 ಅಭ್ಯರ್ಥಿಗಳ ದೈಹಿಕ ಕ್ಷಮತೆ, ವೈದ್ಯಕೀಯ ಹಾಗೂ ವ್ಯಾಸಂಗ ಸೇರಿದಂತೆ ಇತರೆ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.
ನೇಮಕಾತಿ ರಾಲಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿ (Admit Card) ನಿಗದಿಪಡಿಸಿರುವ ದಿನಾಂಕ ಮತ್ತು ಸಮಯದಲ್ಲಿ ತಪ್ಪದೆ ಬೆಳಗ್ಗೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಮಾರ್ಷಲಿಂಗ್ ಪ್ರದೇಶಕ್ಕೆ ವರದಿ ಮಾಡಿಕೊಳ್ಳಬೇಕು.
ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸೂಚಿಸಿದಂತೆ ಎಲ್ಲಾ ಮೂಲ ದಾಖಲೆಗಳು ಮತ್ತು ಅವುಗಳ ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ತರಬೇಕು. ದಾಖಲೆಗಳು ತರದಿದ್ದರೆ ಅಥವಾ ತಪ್ಪು ದಾಖಲೆಗಳಿದ್ದರೆ ಅಭ್ಯರ್ಥಿಗಳನ್ನು ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು.
ನೇಮಕಾತಿಯಲ್ಲಿ ಸಹಾಯ ಮಾಡುವ ಭರವಸೆ ನೀಡುವ ಮಧ್ಯವರ್ತಿಗಳ ಮೋಸಕ್ಕೆ ಅಭ್ಯರ್ಥಿಗಳು ಬಲಿಯಾಗಬಾರದು. ಯಾವುದೇ ರೀತಿಯ ಹಣವನ್ನು ಯಾರಿಗೂ ನೀಡಬೇಡಬಾರದು. ಆಯ್ಕೆಯು ಸಂಪೂರ್ಣವಾಗಿ ಅರ್ಹತೆ ಮತ್ತು ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಆಧಾರದ ಮೇಲೆ ಮಾತ್ರ ನಡೆಯುತ್ತದೆ.
ಇದನ್ನೂ ಓದಿ: ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸಿ | ಮಾಜಿ ಸಂಸದ ಉಗ್ರಪ್ಪ ಆಗ್ರಹ
ಯಾವುದೇ ರೀತಿಯ ಮಾದಕ ದ್ರವ್ಯಗಳು ಅಥವಾ ನಶೆ ತರುವ ವಸ್ತುಗಳನ್ನು ಸೇವಿಸುವುದು ಮತ್ತು ಸಾಗಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆಯ್ದ ಅಭ್ಯರ್ಥಿಗಳ ಡ್ರಗ್ ಸೇವನೆ ಪತ್ತೆ ಪರೀಕ್ಷೆಯನ್ನು ಸಹ ಸ್ಥಳದಲ್ಲಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ, ನೇಮಕಾತಿ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಬೇಕು ಹಾಗೂ ಸೂಕ್ತ ಕ್ರೀಡಾ ಉಡುಪು ಹಾಗೂ ಪಾದರಕ್ಷೆ ಧರಿಸಬೇಕು.
ಹೆಚ್ಚಿನ ಅಧಿಕೃತ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ www.joinindianarmy.nic.in ಅನ್ನು ಸಂಪರ್ಕಿಸುವAತೆ ಹಾಗೂ ವಾಟ್ಸ್ಪ್ ಚಾನಲ್ INDIAN ARMY RECRUITMENT INFO @KARNATAKA channel on Whats App: https://whatsapp.com/channel/
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

