CHITRADURGA NEWS | 22 JULY 2026
ಚಿತ್ರದುರ್ಗ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ (02/2027) ಹುದ್ದೆಗಳ ಆಯ್ಕೆ ಪರೀಕ್ಷೆಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.
ಇದನ್ನೂ ಓದಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01 ಜುಲೈ 2005 ರಿಂದ 01 ಜನವರಿ 2010 ರ ನಡುವೆ ಜನಿಸಿರಬೇಕು ಹಾಗೂ ನೋಂದಣಿ ದಿನಾಂಕದ ವೇಳೆಗೆ ಗರಿಷ್ಠ 22 ವರ್ಷ ಮೀರಬಾರದು.
ವಿಜ್ಞಾನ ವಿಭಾಗದ ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ 10+2/ಪಿಯುಸಿಯಲ್ಲಿ ಕನಿಷ್ಠ ಶೇ. 50 ಅಂಕ ಗಳಿಸಿರಬೇಕು (ಇಂಗ್ಲಿಷ್ನಲ್ಲಿ ಕನಿಷ್ಠ ಶೇ. 50 ಅಂಕ ಕಡ್ಡಾಯ) ಅಥವಾ ಶೇ. 50 ಅಂಕಗಳೊಂದಿಗೆ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ/ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು.
ಇತರ ವಿಭಾಗದ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಕನಿಷ್ಠ ಶೇ. 50 ಅಂಕ ಹಾಗೂ ಇಂಗ್ಲಿಷ್ನಲ್ಲಿ ಶೇ. 50 ಅಂಕಗಳೊಂದಿಗೆ ಪಿಯುಸಿ/10+2 ಅಥವಾ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಅರ್ಜಿಯೊಂದಿಗೆ ಶೈಕ್ಷಣಿಕ ಪ್ರಮಾಣ ಪತ್ರ, ಆಧಾರ್/ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ದೈಹಿಕ ಸಾಮಥ್ರ್ಯ ಪ್ರಮಾಣ ಪತ್ರ ಹಾಗೂ ಭಾವಚಿತ್ರಗಳನ್ನು ಸಲ್ಲಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು https://iafrecruitment.edcil.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-295108, ಮೊಬೈಲ್ ಸಂಖ್ಯೆ 9945587060, 7022459064 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

