CHITRADURGA NEWS | 09 September 2026
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬಹನ್ಮಠದಲ್ಲಿ ದಿನಾಂಕ 13-10-2026 ರಿಂದ 21-10-2026 ರವರೆಗೆ ನಡೆಯಲಿರುವ ಶರಣಸಂಸ್ಕೃತಿ ಉತ್ಸವದಲ್ಲಿ ಕೃಷಿ-ಕೈಗಾರಿಕಾ ಮೇಳ, ವಸ್ತು ಪ್ರದರ್ಶನ ಹಾಗೂ ಕುಸ್ತಿ ಪಂದ್ಯಾವಳಿವನ್ನು ಆಯೋಜಿಸುವ ಕುರಿತು ಚರ್ಚಿಸಲು ಸೆ.12 ಶನಿವಾರ ಸಂಜೆ 4 ಗಂಟೆಗೆ ಕೃಷಿಮೇಳ ಮತ್ತು ವಸ್ತುಪ್ರದರ್ಶನ ಕುರಿತು ಹಾಗೂ ಸಂಜೆ 6.00 ಗಂಟೆಗೆ ಕುಸ್ತಿ ಪಂದ್ಯಾವಳಿ ಕುರಿತು ಶ್ರೀಮಠದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
ಸಾರ್ವಜನಿಕರು, ರೈತಾಪಿ ಜನರು ಹಾಗೂ ಅಧಿಕಾರಿಗಳು, ಕ್ರೀಡಾಭಿಮಾನಿಗಳು ಈ ಸಭೆಗಳಿಗೆ ಆಗಮಿಸಿ ಸೂಕ್ತ ಸಲಹೆ ಸಹಕಾರ ನೀಡುವುದರ ಮೂಲಕ ಈ ವರ್ಷದ ಕೃಷಿ-ಕೈಗಾರಿಕಾ ಮೇಳ ಮತ್ತು ವಸ್ತು ಪ್ರದರ್ಶನ ಹಾಗೂ ಕುಸ್ತಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಸಂಘಟಿಸಲು ಸಹಕರಿಸುವಂತೆ ಶ್ರೀಮಠದ ಪ್ರಕಟಣೆಯಲ್ಲಿ ಕೋರಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

