By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    3 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    3 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    14 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    14 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    5 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    4 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ

News Desk Chitradurga News
Last updated: 30 September 2025 22:37
News Desk Chitradurga News
10 months ago
Share
ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ
SHARE

CHITRADURGA NEWS | 01 OCTOBER 2025

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ 2025ರ ಅಂಗವಾಗಿ ಶ್ರೀ ಮುರುಘಾಮಠದಲ್ಲಿ ಅಯೋಜಿಸಲಾಗಿದ್ದ ಕೃಷಿ ಮತ್ತು ಕೈಗಾರಿಕೆ ಮೇಳವನ್ನು ಕರ್ನಾಟಕ ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ್ ದಳವಾಯಿ ಉದ್ಘಾಟಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ

ಈ ವೇಳೆ ಡಾ.ಅಶೋಕ್ ದಳವಾಯಿ ಮಾತನಾಡಿ, ಶರಣ ಸಂಸ್ಕೃತಿ ಎಂದರೆ ಕೇವಲ ಧಾರ್ಮಿಕ ಪದ್ಧತಿ ಅಲ್ಲ. ಅದು ಮಾನವ ಶ್ರೇಷ್ಠತೆಯ ಜೀವನಕ್ರಾಂತಿ. ಕರ್ಮ ಸಂಸ್ಕೃತಿಗೆ ಶರಣ ಸಂಸ್ಕೃತಿ ಉತ್ತರ ನೀಡುತ್ತದೆ. 12ನೇ ಶತಮಾನದಲ್ಲಿ ಶರಣರು ಕಾಯಕ ಪರಿಕಲ್ಪನೆ ಮೂಲಕ ಕರ್ಮ ಸಂಸ್ಕೃತಿಗೆ ಸ್ಪಷ್ಟ ಉತ್ತರ ನೀಡಿದರು. ನಾವು ಮಾಡುವ ಕೆಲಸ ಅದುವೇ ಕೈಲಾಸ. ಶರಣರು ಇದನ್ನು ಜಗತ್ತಿಗೆ ತಿಳಿಸಿದರು. 

ಕೃಷಿ ಕಾಯಕ ಶ್ರೇಷ್ಠವಾದದ್ದು, ಬಸವಣ್ಣನವರು ಹೇಳುವ ಹಾಗೆ ಕೃಷಿ ಕಾರ್ಯ ಮಾಡುವ ಸದ್ಭಕ್ತನ ಪಾದವ ತೋರಿಸಿ ಎನ್ನುತ್ತಾರೆ. ಮೇಟಿ ಮತ್ತು ನಾಟಿಗಳ ಮಧ್ಯೆ ನಿರರ್ಥಕ ಸಂಬಂಧವಿದೆ. ನಂತರದ್ದು ದಾಸೋಹ ಪರಿಕಲ್ಪನೆ. 

ಕಾಯಕದಿಂದ ದುಡಿದಿದ್ದನ್ನು ಸ್ವಾರ್ಥಕ್ಕಾಗಿ ಬಳಸದೆ ದಾಸೋಹಕ್ಕೆ ನೀಡುವುದೇ ಪರಮಸುಖ. ಸಂಪಾದನೆ ನಿನ್ನದಾದರೆ ಲಾಭ ಸಮಾಜಕ್ಕೆ ಸೇರಬೇಕು. ಶರಣ ಸಂಸ್ಕೃತಿಯು ಇಂದಿನ ಜ್ವಲಂತ ಸಮಸ್ಯೆಗಳ ನಿರ್ಮೂಲನೆಗೆ ಇರುವ ಒಂದು ಉತ್ತರ. ಯೋಗಿ ಎಂದರೆ ಜಗತ್ತಿಗೆ ಅನ್ನ ಕೊಡುವವನು. ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಬೇಕು. ಇಲ್ಲವಾದಲ್ಲಿ ರೈತರ ಸಂಖ್ಯೆ ಕಡಿಮೆಯಾಗುವ ಸಂಭವವಿದೆ. 

ಇದನ್ನೂ ಓದಿ: PHC ಗಳಲ್ಲಿ ವೈದ್ಯರು ಕಡ್ಡಾಯ ಹಾಜರಾತಿಗೆ ಸೂಚನೆ | ಜಿಪಂ ಸಿಇಒ ಆದೇಶ

ಎಲ್ಲಾ ಉದ್ಯೋಗಗಳಿಗಿಂತ ಕೃಷಿಯಿಂದ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ನಮ್ಮ ಯೋಚನೆ ವಿಚಾರ ಕೃತಿಗಳಲ್ಲಿ ಹತ್ತಿರ ಸಂಬಂಧವಿರಬೇಕು. ಜಾಗತಿಕ ಪರಿವರ್ತನೆಗೆ ಶರಣ ಸಂಸ್ಕೃತಿ ಸಹಕಾರವಾಗಿದೆ ಎಂದು ನುಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ ಕಳಸದ ಮಾತನಾಡಿ, ಕೃಷಿಯಲ್ಲಿ ಆಸಕ್ತಿ ಇರುವವರನ್ನು ಸೇರಿಸಿ ಉತ್ತಮ ವೇದಿಕೆಯನ್ನು ಶ್ರೀಮಠದ ವತಿಯಿಂದ ಕಲ್ಪಿಸಿಕೊಡುತ್ತೇವೆ. ರೈತರ ಬೆಳೆಗೆ ಯೋಗ್ಯವಾದ ಬೆಲೆ ಬರುವಲ್ಲಿ ಶ್ರಮಿಸಬೇಕಿದೆ. 

ಶ್ರೀಮಠವು ಅನೇಕ ಜಾಗದಲ್ಲಿ ಉಪಯೋಗವಾಗುವಂತೆ ಗಿಡಮರ, ತೋಟಗಾರಿಕೆಯನ್ನು ಶ್ರೀಮಠದ ವತಿಯಿಂದ ಮಾಡಿಸುತ್ತಿದ್ದೇವೆ. ಕೃಷಿ ಪದ್ಧತಿ ದಾಖಲಾತಿಯನ್ನು ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ಮಾಡಲು ಶ್ರೀಮಠ ಬದ್ಧವಾಗಿದೆ.  ಶ್ರೀಮಠದ ಮುಂದಿನ ಕಾರ್ಯಕ್ರಮಗಳಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ರೈತರು ಅನ್ನ ಕೊಡುತ್ತಾರೆ, ಆದರೆ ಅವರೇ ಬಡವರು ಎಂಬ ಮಾತಿದೆ. ಅದಕ್ಕೆ ನಾವು ರೈತರು ಬೆಳೆದ ಬೆಳೆಗೆ ಬೆಂಬಲ ನೀಡುವಂತೆ ಕೇಳುತ್ತಿದ್ದೇವೆ. 

ಇದನ್ನೂ ಓದಿ: ನಾಗರಿಕ ಸೇವಾ ಹುದ್ದೆಗಳ ನೇಮಕಾತಿ | 3 ವರ್ಷ ವಯೋಮಿತಿ ಸಡಿಲಿಕೆ | ರಾಜ್ಯ ಸರ್ಕಾರ ಆದೇಶ 

ನಮ್ಮ ರೈತರ ಆದಾಯ ಹೆಚ್ಚು ಮಾಡದಿದ್ದರೆ, ನಮ್ಮ ರೈತರ ಸಂಖ್ಯೆ ಕಡಿಮೆಯಾಗುತ್ತದೆ. ಜೊತೆಗೆ ರೈತರು ಬಹುಬೆಳ ಪದ್ಧತಿ ಅಳವಡಿಸಿಕೊಳ್ಳಬೇಕಿದೆ. ರೈತರು ಮಾರುಕಟ್ಟೆ ಪದ್ಧತಿಯನ್ನು ಕೃಷಿ ಸಹಕಾರ ಸಂಘಗಳ ಮೂಲಕ ಮಾಡಬೇಕಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ ಕಲ್ಪನೆಯನ್ನು, ರೈತರ ಸಮಸ್ಯೆಗಳನ್ನು ರೈತರೇ ಪರಿಹಾರೋಪಾಯ ಮಾಡಿಕೊಂಡರೆ ಸಾಧ್ಯ ಎಂದು ನುಡಿದರು.

ಅಕ್ಕಡಿ ಬೇಸಾಯ ತಜ್ಞರಾದ ಅರಿವು ಪ್ರಭಾಕರ್ ಬಿ ಮಾತನಾಡಿ, ನಾನು ರೈತರ ಅನುಭವ ಎಂಬ ಸಂಸ್ಥೆ ಸ್ಥಾಪಿಸಿದ್ದೇನೆ. ಅಕ್ಷಯಪಾತ್ರೆಯ ರೂಪದಲ್ಲಿ 18 ಬೆಳೆಗಳನ್ನು ಅಕ್ಕಡಿ ಸಾಲುಗಳ ಮೂಲಕ ಬೆಳೆಯಬಹುದು. ಮಳೆಯ ಮುಖಾಂತರ ಈ ಬೆಳೆಗಳನ್ನು ಬೆಳೆಯಬಹುದು. ಬೆಳಗಾವಿಯನ್ನು ಬೆಳೆಕಾಳು ರಾಜ ಎನ್ನುತ್ತಾರೆ. ನಮ್ಮ ಪೂರ್ವಜರು ಮಾಡಿದ ನೈಸರ್ಗಿಕ ಬೇಸಾಯ ಪದ್ಧತಿಯಲ್ಲಿ ಬೇಸಾಯ ಮಾಡುವುದರಿಂದ ಪೌಷ್ಟಿಕಾಂಶಯುತವಾದ ಬೆಳೆಯನ್ನು ಬೆಳೆಯಬಹುದು ಎಂದರು.

ಹುಲಿಕೆರೆ ಕೃಷಿಕರಾದ ವಿಶ್ವೇಶ್ವರ ಸಜ್ಜನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ನಾರಾಣಾಪುರ, ಶಿವಮೊಗ್ಗ ಪಶುವೈದ್ಯಾಧಿಕಾರಿ ಡಾ. ಟಿ.ವಿ.ಗಿರೀಶ್ ಜಲತಜ್ಞರಾದ ಡಾ.ದೇವರಾಜರೆಡ್ಡಿ, ಮಹಮ್ಮದ್ ನೂರುಲ್ಲಾ, ಮಂಗಳಾ ಕಿರಣ್ ನೀಲಗುಂದ, ಹಾವೇರಿಯ ಸಿದ್ದನಗೌಡ ಪಾಟೀಲ್ ಮಾತನಾಡಿದರು.

ಇದನ್ನೂ ಓದಿ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅಧಿಕಾರ ಸ್ವೀಕಾರ

ಗೋಕಾಕ್ ಶ್ರೀ ಶೂನ್ಯ ಸಂಪಾದನೆ ಮಠದ ಮುರುಘರಾಜೇಂದ್ರ ಸ್ವಾಮಿಗಳು, ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶ್ರೀ ವಚನಾನಂದ ಸ್ವಾಮೀಜಿ, ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಲಿಂಗಾರೆಡ್ಡಿ, ರೈತಸಂಘದ ಅಧ್ಯಕ್ಷ ಬಡಗಲಪುರದ ನಾಗೇಂದ್ರ, ಸಂಗನಗೌಡ ಪಾಟೀಲ್, ಹೆಚ್.ಎನ್.ಸೋಮಶೇಖರಪ್ಪ, ಕೆ. ಚಿಕ್ಕಣ್ಣ, ಶಾಂತಅಶೋಕ್, ಧನಂಜಯ, ಕೆಸಿ ಹೊರಕೇರಪ್ಪ, ರೆಡ್ಡಿಹಳ್ಳಿ ವೀರಣ್ಣ, ಭೂತಯ್ಯ, ಸಿದ್ದರಾಮಪ್ಪ ಹಿರಿಯೂರು, ತಿಮ್ಮಯ್ಯ, ಬಸ್ತಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಳ್ಳಿ ರುದ್ರಸ್ವಾಮಿ, ಚಿಕ್ಕಪ್ಪನಹಳ್ಳಿ ಎನ್.ಜೆ.ಸಂತೋಷ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಳಗುಂದ ಸಮಗ್ರ ಕೃಷಿಕರಾದ ಮಂಗಳ ಕಿರಣ್ ನೀಲಗುಂದ, ರಾಜಶೇಖರ ನಿಂಬರಗಿ, ಕೊರಟಗೆರೆ ತಾಲೂಕು ಪಾತಗನಹಳ್ಳಿ ಎ.ಎಸ್.ನಟರಾಜ್, ಮಂಡ್ಯ ಜಿಲ್ಲೆ ಸಾತೇನಹಳ್ಳಿ ನೈಸರ್ಗಿಕ ಕೃಷಿಕಾರದ ಕುಮಾರಸ್ವಾಮಿ, ತಿಪಟೂರು ಜಾಬಘಟ್ಟ ಆರ್.ರಮೇಶ್, ಮಹಮದ್ ನೂರುಲ್ಲಾ ಇವರನ್ನು ಸನ್ಮಾನಿಸಲಾಯಿತು.

ಹಸುವಿಗೆ ಮೇವು ತಿನ್ನಿಸಿದರ ಮೂಲಕ ಸಾಕುಪ್ರಾಣಿಗಳ ಪ್ರದರ್ಶನವನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ ಕಳಸದರವರು ಉದ್ಘಾಟಿಸಿದರು. ವಿವಿಧ ತಳಿಗಳಾದ ಹಳ್ಳಿಕಾರು, ಅಮೃತ ಮಹಲ್, ಶಿಲಾರಿ ಸ್ಥಳೀಯ ಎತ್ತುಗಳು, ಜಾಫರ್, ಬಾಡಿ, ಮುರ ತಳಿಯ ಎಮ್ಮೆಗಳು, ಜರ್ಸಿ, ಮಲೆನಾಡಗಿಡ್ಡ ತಳಿಯ ಆಕಳುಗಳು, ನಂದಿ ದುರ್ಗದ ಮೇಕೆಗಳು, ಕೋಳಿ, ಕುದುರೆ ವಿವಿಧ ಗಿಳಿಗಳು ಪ್ರದರ್ಶನಗೊಂಡವು. 

ಇದನ್ನೂ ಓದಿ: ಕೋಟೆ ಇತಿಹಾಸ ಸಾರುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯ | ತಹಶೀಲ್ದಾರ್ ನಾಗವೇಣಿ

ಕೃಷಿ ಮತ್ತು ಕೈಗಾರಿಕಾ ಮೇಳದಲ್ಲಿ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ಇಂಧನ ಉತ್ಪನ್ನದ ಘಟಕ, ಅಮೃತ್ ಆರ್ಗ್ಯಾನಿಕ್ ಫರ್ಟಿಲೈಜರ್ಸ್, ವಾಹಿನಿಪೈಪ್ಸ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಅಭಿವೃದ್ಧಿ ಉದ್ಯಮಶೀಲತಾ ಅಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಚಳ್ಳಕೆರೆಯ ಹೂವಿನ ಹಾರ ಹಾಗೂ ರೊಟ್ಟಿ ಉತ್ಪಾದನೆ, ಸೆಲ್ಕೋ ಸೋಲಾರ್ ಲೈಟಿಂಗ್ ವಿದ್ಯುತ್ ಉತ್ಪಾದನೆ, ಕಾಟನ್ ಬ್ಯಾಗು ಉತ್ಪಾದನೆ ಮಾರಾಟ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕ¯ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿವಮೊಗ್ಗದ ಅಂಜನಾ ಆರ್ಗಾನಿಕ್ಸ್, ಚಿತ್ರದುರ್ಗದ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ, ಕಡೂರಿನ ಅಡಿಕೆ ಬೇಸಾಯ, ತರೀಕೆರೆಯ ಸ್ವಸಹಾಯ ಸಂಘದ ತರಕಾರಿಬೀಜ ಉತ್ಪಾದನೆ, ಶ್ರೀ ಕಲ್ಲೇಶ್ವರ ಕಾಯರ್ ಇಂಡಸ್ಟ್ರೀಸ್ ಅಂಡ್ ಆರ್ಗಾನಿಕ್ ಮ್ಯಾನುಫ್ಯಾಕ್ಚರರ್ಸ್, ಬಸವೇಶ್ವರ ವೈದ್ಯಕೀಯ ಆರೋಗ್ಯ ತಪಾಸಣೆಯ ಮಾಹಿತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಮಗ್ರ ಮಕ್ಕಳ ರಕ್ಷಣೆ, ಸಾಮಾಜಿಕ ಅರಣ್ಯ ವಿಭಾಗ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಜಲಸಂಪನ್ಮೂಲ ಇಲಾಖೆ ವಿಶ್ವೇಶ್ವರಯ್ಯ ಜಲನಿಗಮ ಮಂಡಳಿ, ಭದ್ರಾ ಮೇಲ್ದಂಡೆ ಯೋಜನೆ, ವಾಹಿನಿ ಪಾಲಿಟೆಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ಶ್ರೀದೇವಿ ಸ್ತ್ರೀಶಕ್ತಿ ಮಹಿಳಾ ಸಂಘ ಕೃಷಿ ಮತ್ತು ವಸ್ತು ಪ್ರದರ್ಶನ, ತಾಲೂಕು ಪಂಚಾಯತ್ ಸಿರಿಧಾನ್ಯ ವಸ್ತುಗಳ ಮಾಹಿತಿ, ಸಹಾಯಕ ಕೃಷಿ ನಿರ್ದೇಶನಾಲಯ ಚಿತ್ರದುರ್ಗ, ವರ್ಷ ಕೃಷಿ ಉಪಕರಣಗಳು ಚಿತ್ರದುರ್ಗ ಪ್ರದರ್ಶನಗೊಂಡವು.

ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನದಲ್ಲಿ ಕೃಷಿ ಇಲಾಖೆ, ಚಿತ್ರದುರ್ಗ ಪ್ರಥಮ, ತೋಟಗಾರಿಕಾ ಇಲಾಖೆ ಚಿತ್ರದುರ್ಗ ದ್ವಿತೀಯ, ಭದ್ರಾ ಮೇಲ್ದಂಡೆ ಯೋಜನೆ ತೃತೀಯ, ಜಿಲ್ಲಾ ಪಂಚಾಯತ್ ಮಹಿಳಾ ಸಂಘ ಸಮಾಧಾನಕರ ಬಹುಮಾನಗಳನ್ನು ಪಡೆದವು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural fairChitradurgaChitradurga newsMuruga Mathಕೃಷಿ ಮೇಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠ
Share This Article
Facebook Email Print
Previous Article ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 01 |ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ, ಆದಾಯಕ್ಕಿಂತ ಖರ್ಚು ಹೆಚ್ಚು
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up