CHITRADURGA NEWS | 01 February 2026
ಚಿತ್ರದುರ್ಗ: ಜಿಲ್ಲೆಯ ಪ್ರಗತಿ ಪರ ರೇಷ್ಮೆ ಬೆಳೆಗಾರರಿಗೆ 2023-24 ಮತ್ತು 2024-25 ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್ʼ
ಫೆ.7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಜಿಲ್ಲೆಯ ರೈತರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು.
100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ ಹಾಗೂ ಚಾಕಿ ಖರೀದಸಿರುವ ಕುರಿತು ರೇಷ್ಮೆ ಗೂಡು ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ
ಹೆಚ್ಚಿನ ಮಾಹಿತಿಗಾಗಿ ಸ್ಥಳಿಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ಪಡೆದು ಅಗತ್ಯ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ರೇಷ್ಮೆ ಉಪನಿರ್ದೇಶಕ ಬೋಜಣ್ಣ ಎಸ್. ತಿಳಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
