
CHITRADURGA NEWS | 10 FEBRUARY 2025
ಚಿತ್ರದುರ್ಗ: ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಹಾಗೂ ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ನಾಳೆ (ಫೆ.11)ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
Also Read: ಒಂದು ಲೋಡ್ ಯೂರಿಯಾ ವಶಕ್ಕೆ | 12.74 ಲಕ್ಷ ಮೊತ್ತದ ಗೊಬ್ಬರ ಅಕ್ರಮ ಸಾಗಾಣೆ
ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಜಿಲ್ಲಾ ಪ್ರವಾಸದ ವಿವರ :
ಫೆ.11 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಚಳ್ಳಕೆರೆಗೆ ಆಗಮಿಸುವರು. ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮಕ್ಕೆ ಭೇಟಿ ನೀಡಿ, ಜಲಾನಯನ ಅಭಿವೃದ್ಧಿ ಇಲಾಖೆಯ RAD-RAFTAR ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು.
ಸಂಜೆ 4ಕ್ಕೆ ರೇಣುಕಾಪುರದಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಸಂಜೆ 5.30ಕ್ಕೆ ಚಿತ್ರದುರ್ಗದಿಂದ ಹೊರಟು ಸಂಜೆ 6ಕ್ಕೆ ಭರಮಸಾಗರಕ್ಕೆ ಆಗಮಿಸಿ, ಸಂಜೆ 6.30ಕ್ಕೆ ತರಳಬಾಳು ಹುಣ್ಣಿಮೆ ಮಹೋತ್ಸವ-2025 ಅಂಗವಾಗಿ ಏರ್ಪಡಿಸಲಾಗಿರುವ “ಕೃಷಿ ಮತ್ತು ಜಲಸಂರಕ್ಷಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
Also Read: ಸೇವಂತಿಗೆ, ತೆಂಗು, ಅಡಿಕೆ ಬೆಳೆ | 3 ದಿನ ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ
ರಾತ್ರಿ 7.30ಕ್ಕೆ ಭರಮಸಾಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.
ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರ ಜಿಲ್ಲಾ ಪ್ರವಾಸ ವಿವರ:
ಫೆ.11 ರಂದು ಬೆಳಿಗ್ಗೆ 6ಕ್ಕೆ ರಾಯಚೂರಿನಿಂದ ಹೊರಟು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಬೆಳಿಗ್ಗೆ 11ಕ್ಕೆ ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರ ಸುಕ್ಷೇತ್ರ ಶ್ರೀ ಭಗೀರಥ ಪೀಠ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡುವರು.
ಮಧ್ಯಾಹ್ನ 12.30ಕ್ಕೆ ಬ್ರಹ್ಮವಿದ್ಯಾನಗರ ಸುಕ್ಷೇತ್ರದಿಂದ ಹೊರಟು ಮಧ್ಯಾಹ್ನ 1ಕ್ಕೆ ಹೊಸದುರ್ಗಕ್ಕೆ ಆಗಮಿಸಿ, ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ತೊಗರಿ ರೇಟ್ ಎಷ್ಟಿದೆ?
ಮಧ್ಯಾಹ್ನ 3ಕ್ಕೆ ಹೊಸದುರ್ಗದಿಂದ ಹೊರಟು ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಸಣ್ಣ ನೀರಾವರಿ ಇಲಾಖೆಯ ಚಿತ್ರದುರ್ಗ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ಸಂಜೆ 4.50ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ನೀರಾವರಿ ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
