CHITRADURGA NEWS | 23 FEBRUARY 2026
ಚಿತ್ರದುರ್ಗ: ಭವಿಷ್ಯದಲ್ಲಿ ಕೃಷಿ ಚಿತ್ರದುರ್ಗ ಜಿಲ್ಲೆಯ ರೈತರ ಕೈ ಹಿಡಿಯಲಿದೆ. ಬೆಂಗಳೂರಿಗೆ ಚಿತ್ರದುರ್ಗದಿಂದ ತರಕಾರಿ, ಹೂವು, ಹಣ್ಣು ಸರಬರಾಜು ಮಾಡುವ ದಿನಗಳು ಹತ್ತಿರದಲ್ಲಿವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.
ಇದನ್ನೂ ಓದಿ: ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಪದಗ್ರಹಣ | ಜಿಲ್ಲಾಧ್ಯಕ್ಷರಾಗಿ ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಸಣ್ಣ ತಿಮ್ಮಪ್ಪ ಆಯ್ಕೆ
ವಿ.ಪಿ. ಬಡಾವಣೆಯ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬೆಂಗಳೂರು ಸುತ್ತಮುತ್ತಲಿನ ಕೃಷಿ ಜಮೀನುಗಳೆಲ್ಲವೂ ರಿಯಲ್ ಎಸ್ಟೇಟ್ ಆಗಿವೆ. ಸದ್ಯಕ್ಕೆ ಚಿತ್ರದುರ್ಗಕ್ಕೆ ಒಳ್ಳೆಯ ಅವಕಾಶಗಳಿವೆ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಭದ್ರಾ ನೀರು ಹರಿಯುವುದರಿಂದ ಇಲ್ಲಿನ ರೈತರು ಹಣ್ಣು, ಹೂವು, ತರಕಾರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಬೆಂಗಳೂರು ಮಾರುಕಟ್ಟೆಯಲ್ಲಿ ಉತ್ತಮ ದರ ಪಡೆಯಬಹುದು ಎಂದರು.
ನಗರದ ಮಧ್ಯ ಭಾಗದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿ ಸ್ಥಳಾಂತರ ಮಾಡಬಾರದು ಎಂದು ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಲಿದೆ. ಆದರೆ, ತೋಟಗಾರಿಕೆ ಇಲಾಖೆಗೆ ಇಷ್ಟು ಜಾಗ ಸಾಕಾಗುವುದಿಲ್ಲ. ಕನಿಷ್ಠ 25 ಎಕರೆ ಜಾಗವಿದ್ದರೆ ಲಾಲ್‌ಬಾಗ್ ಮಾದರಿಯಲ್ಲಿ ಉತ್ತಮ ನಿರ್ವಹಣೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು | ₹36,000 ಕೋಟಿ ಬಾಕಿ ಬಿಲ್‌ಗಾಗಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಜಿಲ್ಲೆಯ ಇತಿಹಾಸ, ಸಂಸ್ಕøತಿ ಹಾಗೂ ಸಾಹಿತ್ಯ ಪರಂಪರೆಯನ್ನು ಸಾರುವಲ್ಲಿ 33ನೇ ಫಲಪುಷ್ಪ ಪ್ರದರ್ಶನ ಯಶಸ್ವಿಯಾಗಿದೆ. ಇಲ್ಲಿ ರೈತರು ಉತ್ತಮವಾಗಿ ಬೆಳೆದಿರುವ ಬೆಳೆಗಳನ್ನು ಪ್ರದರ್ಶನ ಮಾಡಿದ್ದು ಇತರೆ ರೈತರಿಗೆ ಪ್ರೇರಣೆಯಾಗಲಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಭದ್ರಾ ಯೋಜನೆಯಿಂದ ಕೆರೆಗಳಿಗೆ ನೀರು ಹರಿಯುವುದರಿಂದ ರೈತರಿಗೆ ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗಲಿದೆ. ಜಿಲ್ಲೆಯ ಜನರ ಕನಸಾಗಿರುವ ಭದ್ರಾ ನೀರನ್ನು ಮಾರ್ಚ್ ಅಂತ್ಯದೊಳಗೆ ಪ್ರಾಯೋಗಿಕವಾಗಿ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 23 | ಮೆಕ್ಕೆಜೋಳ ರೇಟ್ ಎಷ್ಟಿದೆ?
ತೋಟಗಾರಿಕೆ ಜಂಟಿ ನಿರ್ದೇಶಕಿ ಜಿ.ಸವಿತಾ, ತೋಟಗಾರಿಕೆ ಜಂಟಿ ಕಾರ್ಯದರ್ಶಿ ಗಿರೀಶ್, ಹಿರಿಯ ಸಹಾಯಕ ನಿರ್ದೇಶಕ ತೋಟಯ್ಯ, ಜಿ.ಪಂ. ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಬಾಬುರೆಡ್ಡಿ, ತೋಟಗಾರಿಕೆ ಸಂಘದ ರೀನಾ ವೀರಭದ್ರಪ್ಪ, ಸುಮನ ಅಂಗಡಿ, ಸುಮನ ತಿಮ್ಮಾರೆಡ್ಡಿ, ಶ್ವೇತಾ, ನಾಗರಾಜ್ ಬೇದ್ರೆ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

