
CHITRADURGA NEWS | 17 OCTOBER 2025
ಚಿತ್ರದುರ್ಗ: ಟೆಕ್ ಕ್ಷೇತ್ರದಲ್ಲಿ ಈಗಾಗಲೇ ಗಮನಾರ್ಹ ಪ್ರಗತಿ ಸಾಧಿಸುತ್ತಿರುವ ಕರ್ನಾಟಕಕ್ಕೆ ಎಐ(AI) ಹಬ್ ಯೋಜನೆ ಕೈ ತಪ್ಪಲು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ನಿರ್ಲಕ್ಷ್ಯತೆಯೇ ಕಾರಣ ಎಂದು ಜಿಲ್ಲಾ ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವರ ಭೇಟಿ | 200 ಬೆಡ್ ಆಧುನಿಕ ಸುಸಜ್ಜಿತ ಆಸ್ಪತ್ರೆ ನಿರ್ಮಾಣ
ಈ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ, ಭಾರತದ ಮೊದಲ ಎಐ- ಹಬ್‍ಗಾಗಿ ಗೂಗಲ್ 15 ಶತ ಕೋಟಿ ಡಾಲರ್ ಹೂಡಿಕೆ ಮಾಡಲಿದ್ದು, ಈ ಬೃಹತ್ ಯೋಜನೆಯನ್ನು ತನ್ನದಾಗಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಯೋಜನೆ ಅಂದ್ರ ಪಾಲಾಗಿದೆ.
ಅಧಿಕಾರದ ಕಿತ್ತಾಟ, ಆರ್‍ಎಸ್‍ಎಸ್ ನಿಷೇದಂತಹ ಜನ ವಿರೋಧಿ ನಿಲುವುಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಈ ಮೂಲಕ ರಾಜ್ಯವನ್ನು ಅಧೋಗತಿಗೆ ತಳ್ಳುತ್ತಿದೆ ಎಂದು ದೂರಿದರು.
ಅಧಿಕಾರ ಹಿಡಿಯಲು ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮರುಳು ಮಾಡುತ್ತಾ ಸರ್ಕಾರವಾಗಿ ಮಾಡಬೇಕಾದ ಪ್ರಗತಿಪರ ಕೆಲಸಗಳ ಬಗ್ಗೆ ಚಿಂತನೆ ಮಾಡದಿರುವುದು ರಾಜ್ಯದ ಜನರ ದುರಂತ.
ಕೃತಕ ಬುದ್ಧಿಮತ್ತೆಯ ಉದ್ಯಮವನ್ನು ರಾಜ್ಯದಲ್ಲಿ ಸ್ಥಾಪನೆ ಮಾಡಿದ್ದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ದೊರೆಯುತ್ತಿತ್ತು. ಉದ್ದಿಮೆ ಮೂಲಕ ರಾಜ್ಯದ ಅಭಿವೃದ್ಧಿಗೂ ಅನುಕೂಲವಾಗುತ್ತಿತ್ತು. ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಪರವಾದ, ಅಭಿವೃದ್ಧಿಪರವಾದ ಯಾವುದೇ ಚಿಂತನೆಗಳಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ: ಭೋವಿ ನಿಗಮದ ಅಧ್ಯಕ್ಷರ ಪದಗ್ರಹಣ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭಾಗೀ
ಈ ಹಿಂದೆಯೂ ಸಹಾ ರಾಜ್ಯಕ್ಕೆ ಅನೇಕ ಕಂಪನಿಗಳು ಬಂದಿದ್ದರೂ ಸಹಾ ಆವರಿಗೆ ಸಮರ್ಪಕವಾಗಿ ಜಾಗ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ನೀಡದೆ ಇದ್ದ ಕಾರಣ ಅವುಗಳು ಇತರೆ ರಾಜ್ಯಗಳಿಗೆ ಹೋಗಿದ್ದಾರೆ.
ರಾಜ್ಯದ ಯುವ ಜನತೆಗೆ ಉದ್ಯೋಗಾವಕಾಶ ದೊರೆಯುವಲ್ಲಿ ಹಿನ್ನಡೆಯಾಗಿದೆ, ರಾಜ್ಯ ಸರ್ಕಾರದಿಂದ ಯಾವುದೇ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವಲ್ಲಿ ಅರ್ಥಿಕವಾಗಿ ಸಬಲವಾಗಿಲ್ಲ. ಈ ಹಿನ್ನಲೆಯಲ್ಲಿ ವಿದೇಶಿ ಕಡೆಗಳಿಂದ ಬಂದಂತಹ ಕಂಪನಿಗಳನ್ನು ಸಹಾ ಉಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
