
CHITRADURGA NEWS | 21 JULY 2026
ಚಿತ್ರದುರ್ಗ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ 84 ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಕರ್ನಾಟಕದವರಾಗಿರುವ ಮಲ್ಲಿಕಾರ್ಜುನ ಖರ್ಗೆರವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಗೊಂಡಿರುವುದಲ್ಲದೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನು ಗಟ್ಟಿಯಾಗಿ ಬೆಳೆಯಬೇಕಾಗಿರುವುದರಿಂದ ಭಗವಂತ ಅವರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಮುದಸಿರ್‍ನವಾಜ್, ಸೈಯದ್ ಸೈಫುಲ್ಲಾ, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಸೈಯದ್ ಗೌಸ್ ಅಹಮದ್, ವಸೀಂ ಬಡಾಮಕಾನ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

