ಮುಖ್ಯ ಸುದ್ದಿ
ALAMATTI-CHITRADURGA; ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ
CHITRADURGA NEWS | 12 JULY 2024
ಚಿತ್ರದುರ್ಗ: ಮಧ್ಯ ಕರ್ನಾಟಕ ಚಿತ್ರದುರ್ಗಕ್ಕೆ ಉತ್ತರ ಕರ್ನಾಟಕದೊಂದಿಗೆ ಸಂಪರ್ಕ ಕಲ್ಪಿಸಿ ಇಲ್ಲಿಂದ ಬೆಂಗಳೂರು ಹಾಗೂ ದಕ್ಷಿಣ ಕರ್ನಾಟಕ ತಲುಪಲು ಸುಲಭವಾಗುವಂತೆ ರೈಲ್ವೇ ಯೋಜನೆ ರೂಪಿಸಲು ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಉತ್ಸುಕರಾಗಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳು ಇದ್ದಾಗ ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಕೊಡಲಾಗಿತ್ತು ಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆಯನ್ನು ಹೆದ್ದಾರಿ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ | ಗೋವಿಂದ ಕಾರಜೋಳ
ರಾಜ್ಯ ಹಾಗೂ ಕೇಂದ್ರ ಸರ್ಕಾರದ 50:50 ಅನುಪಾತದ ಮಾದರಿಯಲ್ಲಿ ಅನುದಾನ ಬಿಡುಗಡೆ ಮಾಡುವುದರೊಂದಿಗೆ, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂಮಿ ಹಸ್ತಾಂತರ ಮಾಡುವುದಾಗಿ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು.
ಆನಂತರ ಈ ಬಗ್ಗೆ ಪ್ರಸ್ತಾಪವಾಗಿಲ್ಲ. ಈಗ ಯೋಜನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ: ಮುರುಘಾ ಮಠದಲ್ಲಿ ಕಳ್ಳರ ಕೈಚಳಕ | ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳವು
ಚಿತ್ರದುರ್ಗ ಜಿಲ್ಲಾಧಿಕಾರಿಗಳು ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಈ ಹಿಂದೆ ಸಲ್ಲಿಸಿದ್ದ ಯೋಜನೆ ಪ್ರಸ್ತಾವನೆ ಪ್ರತಿ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.