
CHITRADURGA NEWS | 04 SEPTEMBER 2025
ಚಿತ್ರದುರ್ಗ: ಈದ್ ಮಿಲಾದ್ ಹಬ್ಬ ಹಾಗೂ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನಲೆಯಲ್ಲಿ, ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿವಿಧ ದಿನಗಳಂದು ಬೆಳಿಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಲವೆಡೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಬೆಸ್ಕಾಂ ಇಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ

ಸೆ.5 ರಂದು ಬೆ. 06 ರಿಂದ ಮಧ್ಯರಾತ್ರಿ 12 ರವರೆಗೆ ಈದ್ ಮಿಲಾದ್ ಹಬ್ಬ ಪ್ರಯುಕ್ತ ಚಿತ್ರದುರ್ಗ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಉಳಿದಂತೆ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದು ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ, ಸೆ.6 ರಂದು ಚಳ್ಳಕೆರೆ ನಗರ ಮತ್ತು ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ.
ಸೆ.7 ರಂದು ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ. ಸೆ.8 ರಂದು ಹೊಸದುರ್ಗ ಪಟ್ಟಣ ಹಾಗೂ ಭರಮಸಾಗರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಹಾಗೂ ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ ಸೆ.12 ರ ಬೆಳಿಗ್ಗೆ 06 ರಿಂದ ಸೆ. 13 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟ ನಿಷೇಧಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ | 17 ಶಿಕ್ಷಕರು ಆಯ್ಕೆ
ಸದರಿ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಆಯಾ ಪ್ರದೇಶದ ವ್ಯಾಪ್ತಿಗೆ ಅನುಗುಣವಾಗಿ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಮದ್ಯ ಮಾರಾಟ ಮಾಡುವಂತಿಲ್ಲ. ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
