By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    5 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    6 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    6 hours ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    17 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    7 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    18 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    10 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    17 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    18 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ನಾಯಕನಹಟ್ಟಿ ಜಾತ್ರೆಗೆ ಏನೆಲ್ಲಾ ವ್ಯವಸ್ಥೆ ಆಗಿದೆ ನೋಡಿ.. 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾಯಕನಹಟ್ಟಿ ಜಾತ್ರೆಗೆ ಏನೆಲ್ಲಾ ವ್ಯವಸ್ಥೆ ಆಗಿದೆ ನೋಡಿ.. 

News Desk Chitradurga News
Last updated: 14 March 2025 19:35
News Desk Chitradurga News
1 year ago
Share
Nayakanahatty sri Thipperudraswamy
ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ
SHARE

CHITRADURGA NEWS | 14 MARCH 2025

ಚಿತ್ರದುರ್ಗ: ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅಗತ್ಯ ಸಿದ್ಧತೆ ಕಾರ್ಯ ಕೈಗೊಳ್ಳಲಾಗಿದೆ.

Also Read: ಭಕ್ತ ಸಾಗರದ ನಡುವೆ ಸಾಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ | ಆಗಸದಲ್ಲಿ ಗರುಢ ಪ್ರದಕ್ಷಿಣೆ

ನಾಯಕನಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕಣ, ಪಾದಗಟ್ಟೆ ರಸ್ತೆ ಅಗಲೀಕರಣ, ಚರಂಡಿ ಸ್ವಚ್ಛಗೊಳಿಸಲಾಗಿದೆ. ಅನಾವಶ್ಯಕ ಮುಳ್ಳುಗಳ ಗಿಡ ತೆರವುಗೊಳಿಸಲಾಗಿದೆ. ಪಟ್ಟಣದ ಎಲ್ಲ ವಾರ್ಡ್‍ಗಳಿಗೆ ನಿರಂತರವಾಗಿ ನೀರು ಸರಬರಾಜು, ಬೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಪೂರೈಕೆ ಮಾಡುವ ಮೂಲಕ ಬೀದಿದೀಪ, ಹೈಮಾಸ್ಟ್ ದೀಪಗಳ ವ್ಯವಸ್ಥೆ ಮಾಡಲಾಗಿದೆ.

ತೇರುಬೀದಿ ಹಾಗೂ ಪಾದಗಟ್ಟೆ ರಸ್ತೆಯ ಶಿಥಿಲ ವಿದ್ಯುತ್ ಕಂಬಗಳನ್ನು ತೆರವು ಗೊಳಿಸಿ, ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ.

ಜಾತ್ರೆಗೆ ಬರುವ ಭಕ್ತರಿಗೆ ಪಟ್ಟಣದ ಹಲವು ಕಡೆಗಳಲ್ಲಿ ಶೌಚಾಲಯ ವ್ಯವಸ್ಥೆ, ಬಳಸಲು ನೀರಿನ ತೊಟ್ಟಿಗಳು, ಕೊಳವೆ ಬಾವಿಗಳಿಂದ ನಿರಂತರವಾಗಿ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ವ್ಯವಸ್ಥೆ, ಚರಂಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫಿನಾಯಿಲ್, ಸೊಳ್ಳೆಗಳ ನಿಯಂತ್ರಣಕ್ಕೆ ಧೂಮೀಕರಣ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಬ್ಯಾನರ್‍ಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಿಂದ ಕೈಗೊಳ್ಳಲಾಗಿದೆ.

Also Read: ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ | ಮಾ.16 ರಂದು ದೊಡ್ಡ ರಥೋತ್ಸವ

ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ 4 ಕಡೆ ತಾತ್ಕಾಲಿಕ ಕ್ಲಿನಿಕ್, 4 ಮೊಬೈಲ್ ಆಂಬುಲೆನ್ಸ್, ನೀರಿನ ಶುದ್ಧತೆ ಹಾಗೂ ಆಹಾರ ತಪಾಸಣೆ ಬಗ್ಗೆ ಪರೀಕ್ಷೆ ಇತರೆ ಕೆಲಸ ಕಾರ್ಯಗಳಿಗೆ ಒಟ್ಟು 150 ಜನ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾತ್ರೆ ಸಮಯದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ಸಲುವಾಗಿ ಚಳ್ಳಕೆರೆ ನಗರಸಭೆ ಮತ್ತು ಮೊಳಕಾಲ್ಮುರು ಪಟ್ಟಣ ಪಂಚಾಯಿತಿಯಿಂದ ಪೌರಕಾರ್ಮಿಕರನ್ನು ನಿಯೋಜಿಸಲಾಗಿದ್ದು, ಸ್ವಚ್ಚತಾ ಕೆಲಸಕ್ಕೆ ಹೆಚ್ಚು ಆದ್ಯತೆ ನೀಡಲು ಕ್ರಮ ವಹಿಸಲಾಗಿದೆ.

ಸುಗಮ ಸಂಚಾರಕ್ಕೆ ವ್ಯವಸ್ಥೆ:

ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಪಟ್ಟಣದ ಹಲವು ಕಡೆಗಳಲ್ಲಿ ಬಸ್‍ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ-ಜಗಳೂರು- ಹೊಸಪೇಟೆ ಕಡೆಯಿಂದ ಬರುವ ವಾಹನಗಳಿಗೆ ಪಟ್ಟಣದ ಗಂಗಯ್ಯನಹಟ್ಟಿ ಬಳಿ.

Also Read: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಬಳ್ಳಾರಿ-ಅನಂತಪುರ- ರಾಯದುರ್ಗ- ಕಲ್ಯಾಣದುರ್ಗ ಕಡೆಯಿಂದ ಬರುವ ವಾಹನಗಳಿಗೆ ತಳಕು ರಸ್ತೆಯ ಮದರಸಾದ ಬಳಿ. ಬೆಂಗಳೂರು- ತುಮಕೂರು- ಚಳ್ಳಕೆರೆ- ಚಿತ್ರದುರ್ಗ ಮಾರ್ಗದಿಂದ ಬರುವವರಿಗೆ ಮನಮೈನಹಟ್ಟಿ ಏಕಾಂತೇಶ್ವರ ದೇವಾಲಯದ ಬಳಿ ಬಸ್‍ನಿಲ್ದಾಣಗಳನ್ನು ತೆರೆಯಲಾಗಿದೆ.

200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ :

ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 15 ರಿಂದ 17 ರವರೆಗೆ ಜರುಗಲಿರುವ ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ. ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ. ಹಿರಿಯೂರು-ನಾಯಕನಹಟ್ಟಿ ವಯಾ ಸಾಣಿಕೆರೆ-ಚಳ್ಳಕೆರೆ-ನೇರ್ಲಗುಂಟೆ. ನಾಯಕನಹಟ್ಟಿ-ಪರಶುರಾಂಪು ವಯಾ ಚಳ್ಳಕೆರೆ ಮಾರ್ಗದಲ್ಲಿ ಸಂಚರಿಸಲಿವೆ.

Also Read: 3ನೇ ತರಗತಿ ಬಾಲಕಿ ಮೇಲೆ 56 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಪ್ರಾಣಿ ಬಲಿ ನಿಷೇಧ:

ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಅನ್ವಯ ದೇವಸ್ಥಾನ ಹಾಗೂ ದೇವಸ್ಥಾನದ ಅವರಣದಲ್ಲಿ ದೇವರ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನಿಗೆ ವಿರುದ್ದವಾಗಿರುತ್ತದೆ.

ಮಾರ್ಚ್ 16 ರಂದು ನಾಯಕನಹಟ್ಟಿಯ ಶ್ರೀಗುರು ತಿಪ್ಪೆರುದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದ್ದು, ಇದಕ್ಕೆ ಪೂರಕವಾಗಿ ಮಾರ್ಚ್ 09 ರಿಂದ 17 ರವರೆಗೆ ಜಾತ್ರ ನಡೆಯಲಿದೆ.

Also Read: ಭೀಕರ ಅಪಘಾತ | ಹಿರಿಯೂರಿನ ಸಿದ್ಧರಾಜು ಮೃತ

ಈ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಅವರಣ ಹಾಗೂ ಸುತ್ತಮುತ್ತಲಿನ ಪ್ರದೇಶದೊಳಗೆ ಭಕ್ತಾಧಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ಮತ್ತು ಇತರೆ ಪ್ರಾಣಿಗಳನ್ನು ತೆಗೆದುಕೊಂಡು ಬರುವುದು ಹಾಗೂ ಮಾರಕಾಸ್ತ್ರಗಳನ್ನು ತರುವುದು, ಇತರೆ ಅನಾಗರೀಕ ಪದ್ಧತಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧವಾಗಿ ಪ್ರಾಣಿ ಬಲಿ ನಿಷೇಧ ಪ್ರಚಾರಕ್ಕಾಗಿ ಅಗತ್ಯವಾಗಿ ಬೇಕಾದ ಕರಪತ್ರ, ಬ್ಯಾನರ್‍ಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಅಗತ್ಯವಿರುವ 8 ಕಡೆ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಲಾಗಿದೆ.

ಮದ್ಯಪಾನ ನಿಷೇಧ:

ಜಾತ್ರೆಯ ಆವರಣದಿಂದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 16 ರಿಂದ 17 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಿಷೇಧದ ಪೂರ್ವದಲ್ಲಿ ಗ್ರಾಮದೊಳಗೆ ಮದ್ಯ ತರದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಅಬಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ರಥಕ್ಕೆ ರೂ.2.50 ಕೋಟಿ ವಿಮೆ:

ನಾಯಕನಹಟ್ಟಿ ಜಾತ್ರೆಯ ಕೇಂದ್ರ ಬಿಂದು ದೊಡ್ಡ ರಥವಾಗಿದ್ದು, ಪ್ರತಿ ವರ್ಷದಂತೆ ರಥ ಮತ್ತು ಬಾಬುದಾರರು ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಅಪಘಾತ ವಿಮೆಯನ್ನು ಮಾಡಿಸಲಾಗಿದ್ದು, ಗುರು ತಿಪ್ಪೇರುದ್ರಸ್ವಾಮಿ ರಥಕ್ಕೆ ರೂ.2.50 ಕೋಟಿ ಮೊತ್ತದ ವಿಮಾ ಸೌಲಭ್ಯಗಳನ್ನು ಒದಗಿಸಲಾಗಿದೆ.

Also Read: ಜಿಲ್ಲೆಯ ಜನರಿಗೆ ಎಚ್ಚರಿಕೆ ‌| ಮಿತಿಮೀರಿದ ತಾಪಮಾನ | ಈ‌ ಸಲಹೆ ಪಾಲಿಸಿ..

ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮಾರ್ಗದರ್ಶನ ಪಡೆದು ದೊಡ್ಡರಥಕ್ಕೆ ಮತ್ತು ಚಿಕ್ಕರಥಕ್ಕೆ ದುರಸ್ಥಿ ಮಾಡಿಸಿ, ಸರ್ವೀಸಿಂಗ್ ಮಾಡಿ, ರಥೋತ್ಸವಕ್ಕೆ ಸಿದ್ಧಪಡಿಸಲಾಗಿದೆ. ಮಧ್ಯ ಕರ್ನಾಟಕದ ಭಾಗದ ಅತೀ ಎತ್ತರದ ಸುಮಾರು 200 ಟನ್ ತೂಕವಿರುವ ಈ ರಥವು 5 ಚಕ್ರಗಳನ್ನು ಹೊಂದಿದೆ. ರಥಕ್ಕೆ ಕಳೆದ ಎರಡು ದಿನಗಳಿಂದ ಬಣ್ಣಬಣ್ಣದ ಬಾವುಟಗಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಲಾಗಿದ್ದು, ರಥವನ್ನು ಎಳೆಯುವ 2 ಅಡಿ ಸುತ್ತಳತೆ ಇರುವ ನೂತನ ಮಿಣಿ (ಹಗ್ಗ)ಯನ್ನು ಪರೀಕ್ಷಿಸಲಾಗಿದೆ. ಆ ಮೂಲಕ ಜಾತ್ರೆಗೆ ರಥವನ್ನು ಎಲ್ಲಾ ಹಂತದಲ್ಲೂ ಸಿದ್ಧಗೊಳಿಸಲಾಗಿದೆ.

ನಾಯಕನಹಟ್ಟಿ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಯಾವುದೇ ತರಹದ ಕುಂದುಕೊರತೆ ಉಂಟಾಗದಂತೆ ಅಗತ್ಯವಾದ ಎಲ್ಲಾ ಸಿದ್ಧತೆಯನ್ನು ಜಿಲ್ಲಾಡಳಿತ ಕೈಗೊಂಡಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:arrangements for smooth trafficban on animal sacrificeChitradurgaChitradurga newsChitradurga Updatesfair special vehicleKannada Latest NewsKannada NewsNayakanahatti fairpreparationsSri Guru Tipperudraswamyಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾತ್ರಾ ವಿಶೇಷ ವಾಹನನಾಯಕನಹಟ್ಟಿ ಜಾತ್ರೆಪ್ರಾಣಿ ಬಲಿ ನಿಷೇಧಶ್ರೀ ಗುರು ತಿಪ್ಪೇರುದ್ರಸ್ವಾಮಿಸಿದ್ಧತೆಸುಗಮ ಸಂಚಾರಕ್ಕೆ ವ್ಯವಸ್ಥೆ
Share This Article
Facebook Email Print
Previous Article ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ | ಮಾ.16 ರಂದು ದೊಡ್ಡ ರಥೋತ್ಸವ
Next Article ನಾಯಕನಹಟ್ಟಿ ಜಾತ್ರೆ ಮುಕ್ತಿ ಭಾವುಟ ಹರಾಜಿಗೆ ಅಡ್ವಾನ್ಸ್ ಚೆಕ್ ಕಡ್ಡಾಯ
Leave a Comment

Leave a Reply Cancel reply

Your email address will not be published. Required fields are marked *

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಮುಖ್ಯ ಸುದ್ದಿ
D.Sudhakar son suhas met D.K.Shivakumar
ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up