
CHITRADURGA NEWS | 11 FEBRUARY 2026
ಚಿತ್ರದುರ್ಗ: ಕಾರ್ಮಿಕರು, ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಫೆ.12 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು, ರೈತರು ವಿವಿಧ ಸಂಘಟನೆಗಳವರು ಪಾಲ್ಗೊಳ್ಳುವಂತೆ ಸಂಯುಕ್ತ ಹೋರಾಟ ಸಮಿತಿಯ ಜೆ.ಯಾದವರೆಡ್ಡಿ ಮನವಿ ಮಾಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 10 ಫೆಬ್ರವರಿ | ಇಂದಿನ ಮಾರುಕಟೆಯಲ್ಲಿ ಅಡಿಕೆ ರೇಟ್
ಮುಷ್ಕರಕ್ಕೆ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ಮುಖಂಡರುಗಳ ತ್ಯಾಗ ಬಲಿದಾನಗಳಿಂದ ಜಾರಿಗೆ ಬಂದ ಕಾನೂನುಗಳನ್ನು ಕೇಂದ್ರ ಸರ್ಕಾರ ಬುಡಮೇಲು ಮಾಡಲು ಹೊರಟಿರುವುದರಿಂದ ಕಾರ್ಮಿಕರಿಗೆ ಸಾಮಾಜಿಕ ಹಾಗೂ ವೇತನ ಭದ್ರತೆಯಿಲ್ಲದಂತಾಗಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಬಿಜಿರಾಮ್‍ಜಿ ಎಂದು ಬದಲಾಯಿಸಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ನರೇಗಾ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ನೂರು ದಿನಗಳ ಉದ್ಯೋಗ ನೀಡಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ರೈತರು ಬೀಜ ಉತ್ಪಾದನೆ ಮಾಡುವಂತಿಲ್ಲ. ಕಂಪನಿಗಳಲ್ಲಿಯೇ ಖರೀಧಿಸಬೇಕೆಂಬ ನಿಯಮ ಹೇರಿರುವುದರಿಂದ ಕಾರ್ಮಿಕರು, ರೈತರ ಬದುಕು ನಾಶವಾಗುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.
ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡುತ್ತ ವಿಕಸಿತ ಭಾರತವೆಂದು ಹೆಮ್ಮೆಯಿಂದ ಬೀಗುತ್ತಿರುವ ಕೇಂದ್ರ ಸರ್ಕಾರ ರೈತರು, ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಿರುದ್ಯೋಗ ಜಾಸ್ತಿಯಾಗಿದೆ. ಧರ್ಮ, ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕೋಮುವಾದಿ ಬಿಜೆಪಿ ಮೊದಲು ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಒತ್ತು ಕೊಡಲಿ.
ಇದನ್ನೂ ಓದಿ: MRP ಮೀರಿ ಕೂಲ್ ಡ್ರಿಂಕ್ ಮಾರಾಟ | KSRTC ಬಸ್ ನಿಲ್ದಾಣದ ವ್ಯಾಪಾರಿಗೆ ನೋಟೀಸ್
ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚಕಾರವೆತ್ತದೆ ಮೌನವಹಿಸಿರುವುದು ನೋವಿನ ಸಂಗತಿ. ಭದ್ರಾ ಮೇಲ್ದಂಡೆ ಯೋಜನೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದರು. ರಾಜ್ಯದ ಸಂಸದರುಗಳು ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲವೆಂದು ಕಿಡಿ ಕಾರಿದರು.
ರೈತ ಮುಖಂಡ ಕೆ.ಪಿ.ಭೂತಯ್ಯ ಮಾತನಾಡಿ, ಕಾರ್ಪೊರೇಟ್ ಕಂಪನಿಗಳು ಹಾಗೂ ಉದ್ಯಮಿಗಳ ಪರವಾಗಿರುವ ಆಳುವ ಸರ್ಕಾರಗಳು ಕಾರ್ಮಿಕರು, ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಬೆಳೆವಿಮೆ ಕೈಸೇರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು.
ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ ಗೋವಿಂದ ಕಾರಜೋಳ
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ಟಿ.ಶಫಿವುಲ್ಲಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
