Connect with us

    ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ರಾಜ್ಯ ಚುನಾವಣಾ ಅಧಿಕಾರಿಗಳು ನಡೆಸಿದ ವಿಡಿಯೋ ಸಂವಾದ

    ಮುಖ್ಯ ಸುದ್ದಿ

    ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

    CHITRADURGA NEWS | 20 FEBRUARY 2024

    ಚಿತ್ರದುರ್ಗ: ಲೋಕಸಭೆ ಚುನಾವಣಾ ಕಾರ್ಯಗಳಿಗೆ ನಿಯೋಜನೆ ಮಾಡಿರುವ ಅಧಿಕಾರಿ, ಸಿಬ್ಬಂದಿಗಳು ಅತ್ಯಂತ ನಿಸ್ಪಕ್ಷಪಾತವಾಗಿ ಹಾಗೂ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಿಂದ ಲೋಕಸಭೆ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಅಧಿಕಾರಿಗಳು ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು.

    ಇದನ್ನೂ ಓದಿ: ಫೆಬ್ರವರಿ 20 ರಿಂದ 1 ತಿಂಗಳ ಕಾಲ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು

    ಲೋಕಸಭೆ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಈಗಾಗಲೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಚುನಾವಣೆಯ ಮಾದರಿ ನೀತಿ ಸಂಹಿತೆಯ ಪಾಲನೆ ಬಗ್ಗೆ ತೀವ್ರ ನಿಗಾ ವಹಿಸಲು ಈಗಾಗಲೆ ಸೆಕ್ಟರ್ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ ಎಂದರು.

    ಎಂಸಿಸಿ, ಎಂಸಿಎಂಸಿ, ವಿಡಿಯೋ ಸರ್ವೆಲೆನ್ಸ್, ಸ್ಟ್ಯಾಟಿಕ್ ಸರ್ವೆಲೆನ್ಸ್, ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಆಯಾ ತಂಡಗಳಿಗೆ ಲೋಕಸಭಾ ಚುನಾವಣಾ ಕರ್ತವ್ಯ ಕುರಿತು ಕಾಲ ಕಾಲಕ್ಕೆ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು.

    ಇದನ್ನೂ ಓದಿ: ಸರ್ಕಾರಿ ಮೆಡಿಕಲ್ ಕಾಲೇಜಿಗೆ 500 ಕೋಟಿ ರೂ. ಕೊಟ್ಟಿದ್ದು ಬೊಮ್ಮಾಯಿ ಬಜೆಟ್‍ನಲ್ಲಿ

    ಯಾವುದೇ ಲೋಪದೋಷಗಳಿಗೆ, ದೂರುಗಳಿಗೆ ಅವಕಾಶ ನೀಡಬಾರದು. ಚುನಾವಣಾ ಮಾದರಿ ನೀತಿ ಸಂಹಿತೆ, ಚುನಾವಣಾ ಖರ್ಚು ವೆಚ್ಚಗಳ ನಿರ್ವಹಣೆ ವಿಷಯ ಸೇರಿದಂತೆ ಚುನಾವಣಾ ಕರ್ತವ್ಯಗಳು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಕೈಗೊಳ್ಳಲು ಅಧಿಕಾರಿಗಳು ತಂಡದ ರೂಪದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

    ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಬಿ.ಆನಂದ್, ಅಬಕಾರಿ ಉಪ ಆಯುಕ್ತ ಮಾದೇಶ್, ಡಿಯುಡಿಸಿ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಚುನಾವಣಾ ವಿಭಾಗದ ಮಲ್ಲಿಕಾರ್ಜುನ್ ಸೇರಿದಂತೆ ತಾಲ್ಲೂಕುಗಳ ತಹಸಿಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು.

    ಇದನ್ನೂ ಓದಿ: ಕುಡಿಯುವ ನೀರಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಶಿಸ್ತುಕ್ರಮದ ಎಚ್ಚರಿಕೆ

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top