CHITRADURGA NEWS | 17 SEPTEMBER 2026
ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ಸೇರಿದಂತೆ ರಾಜ್ಯದ 53 ತಾಲ್ಲೂಕುಗಳಲ್ಲಿ ಬರ ಘೋಷಣೆ ಸಂಬಂಧ ಕ್ಷೇತ್ರ ಮಟ್ಟದ ಪರಿಸ್ಥಿತಿ ಪರಿಶೀಲನೆಗೆ (Ground Truthing) ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSDMA) ಅಧಿಸೂಚನೆ ಹೊರಡಿಸಿದೆ. ಶೀಘ್ರವೇ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.
ಇದನ್ನೂ ಓದಿ: ನರೇಂದ್ರ ಮೋದಿ ಜನ್ಮದಿನ | ನೀಲಕಂಠೇಶ್ವರ ದೇವಸ್ಥಾನದಲ್ಲಿ ಬಿಜೆಪಿ ವಿಶೇಷ ಪೂಜೆ
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಮೊದಲು ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಜಿಲ್ಲೆಯ ಚಳ್ಳಕೆರೆ, ಹಿರಿಯೂರು ಹಾಗೂ ಹೊಸದುರ್ಗ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿತ್ತು.
ಸದ್ಯ ಉಳಿದ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮಟ್ಟದಲ್ಲಿ ತೀವ್ರ ಸಿದ್ಧತೆ ನಡೆಸಲಾಗಿದೆ. ಕ್ಷೇತ್ರ ಮಟ್ಟದ ಪರಿಸ್ಥಿತಿ ಪರಿಶೀಲನೆಗೆ ಸೆ.17 ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಬರ ಕೈಪಿಡಿ 2020 ರ ಪ್ರಕಾರ ಬರ ಘೋಷಿಸಲು ಕಡ್ಡಾಯವಾಗಿ ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆ ಅಥವಾ ಸತತ ಮೂರು ವಾರಗಳ ಕಾಲ ಶುಷ್ಕ ವಾತಾವರಣ ಇರಬೇಕು.
ತತ್ಪರಿಣಾಮಗಳ ಮಾನದಂಡವಾಗಿ ಬಿತ್ತನೆ ಪ್ರದೇಶದ ಪ್ರಮಾಣ, ಮಣ್ಣಿನ ತೇವಾಂಶ ಕೊರತೆ, ಉಪಗ್ರಹ ಆಧಾರಿತ ಬೆಳೆ ಸೂಚ್ಯಂಕ ಹಾಗೂ ಜಲಸಂಪನ್ಮೂಲ ಸೂಚ್ಯಂಕಗಳನ್ನು ಪ್ರಭಾವ ಸೂಚಕಗಳಾಗಿ ಪರಿಗಣಿಸಲಾಗುತ್ತದೆ.
ಇದನ್ನೂ ಓದಿ: ರೈಲು ಸಂಚಾರದಲ್ಲಿ ಬದಲಾವಣೆ | ನೇರ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ
ಕ್ಷೇತ್ರ ಮಟ್ಟದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳನ್ನೂ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗುವುದು. ಇದರಿಂದಾಗಿ ಜಿಲ್ಲೆಯ ಎಲ್ಲಾ ಆರೂ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೊಳ್ಳಲಿವೆ ಎಂದು ಸಚಿವ ಟಿ.ರಘುಮೂರ್ತಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

