
CHITRADURGA NEWS | 14 APRIL 2026
ಚಿತ್ರದುರ್ಗ: ಅಸ್ಪøಶ್ಯತೆ, ಅಸಮಾನತೆ, ಶೋಷಣೆಗಳನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ನಿರಂತರವಾಗಿ ಹೋರಾಟ ನಡೆಸಿದ ಮಹಾನ್ ಮಾನವತಾವಾದಿ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು.
ಇದನ್ನೂ ಓದಿ: ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಶತ ಶತಮಾನಗಳಿಂದಲೂ ತುಳಿತಕ್ಕೊಳಪಟ್ಟಿದ್ದ ಜನತೆಗೆ ಸಮಾನತೆ ಸಿಗಲಿ ಎನ್ನುವ ಉದ್ದೇಶವಿಟ್ಟುಕೊಂಡು ಅನೇಕ ವರ್ಷಗಳ ಕಾಲ ಹೋರಾಟ ನಡೆಸಿದರು. ಬಾಲ್ಯದಲ್ಲಿಯೇ ಶೋಷಣೆ, ಅಸ್ಪøಶ್ಯತೆ, ಅವಮಾನ, ಹಿಂಸೆ, ಸಂಕಟಗಳನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣದಿಂದ ಮಾತ್ರ ಶೋಷಣೆ ತಪ್ಪಿಸಲು ಸಾಧ್ಯ ಎನ್ನುವುದನ್ನು ಮನಗಂಡು ಪ್ರತಿಯೊಬ್ಬರಿಗೂ ಸಂವಿಧಾನದಲ್ಲಿ ಶಿಕ್ಷಣವನ್ನು ಒಂದು ಹಕ್ಕನ್ನಾಗಿ ನೀಡಿದ್ದಾರೆಂದು ಗುಣಗಾನ ಮಾಡಿದರು.
ಸ್ವಪ್ರಯತ್ನಗಳಿಂದ ಮಹಾನ್ ಮಾನವತಾವಾದಿಯಾಗಿ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್ ಹೋರಾಟದ ಮೂಲಕ ಶೋಷಿತರಿಗೆ ಧ್ವನಿ ನೀಡಿದರು. ದೇಶದ ಸರ್ವಾಂಗೀಣ ಅಭಿವೃದ್ದಿಗೆ ಸಾಮಾಜಿಕ ಕ್ರಾಂತಿ ಅತ್ಯಗತ್ಯ ಎನ್ನುವುದನ್ನು ಬಲವಾಗಿ ನಂಬಿದ್ದರು. ಅಂತಹ ಮಹಾನ್ ಪುರುಷನ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ: ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿದರು. ಜಯಂತಿಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಹಿರಿಯೂರು ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಜಲದಪ್ಪ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
