
CHITRADURGA NEWS | 14 APRIL 2026
ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ನಗರದಲ್ಲಿ ಸ್ತಬ್ದಚಿತ್ರಗಳು ಹಾಗೂ ಕಲಾತಂಡಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.
ಇದನ್ನೂ ಓದಿ: ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ
ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆ ಆನೆಬಾಗಿಲು, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚನ್ನಮ್ಮ, ಮಹಾವೀರ, ಅಂಬೇಡ್ಕರ್, ಮದರಕರಿ ನಾಯಕ ವೃತ್ತಗಳ ಮಾರ್ಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ತಲುಪಿತು. ಮೆರವಣಿಗೆಯಲ್ಲಿ ನಾಸಿಕ್ ಡೋಲ್, ತಾಷರಾಮ್ ಡೋಲ್ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.
ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಭೆಯ ಅಧ್ಯಕ್ಷ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನ ಪ್ರತಿ ಹಸ್ತಾಂತರಿಸುವ ಸ್ತಬ್ದ ಗಮನ ಸೆಳೆಯಿತು. ಇದರೊಂದಿಗೆ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಅಡಿ ದೊರೆಯುವ ಸರ್ಕಾರದ ಸೌಲತ್ತುಗಳ ಮಾಹಿತಿಯನ್ನು ಪ್ರಚುರಪಡಿಸಲಾಯಿತು.
ಇದನ್ನೂ ಓದಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
ಮೆರವಣಿಗೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿ.ಪಂ. ಸಿಇಓ ಡಾ.ಆಕಾಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಉಪ ವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
