CHITRADURGA NEWS | 11 AUGUST 2026
ಚಿತ್ರದುರ್ಗ: ಅಂಬೇಡ್ಕರ್ ಅವರ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪವಾಗಿದೆ. ಅಂತಹ ಸಂವಿಧಾನವನ್ನು ಕೊಟ್ಟಂತಹ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಡವರ, ಶೋಷಿತರ, ಮಹಿಳೆಯರ ಬದುಕಿನ ಕಥೆಗಾರರಾಗಿದ್ದಾರೆ ಎಂದು ಹಿರಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಎಸ್. ಮಾರುತಿ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ರವರ ಬದುಕು, ಬರಹ, ಸಾಧನೆ ಕುರಿತು ಉಪನ್ಯಾಸ ನೀಡಿದರು.
ಡಾ. ಬಿ. ಆರ್. ಅಂಬೇಡ್ಕರ್ ಅವರು ಲಂಡನ್ನಲ್ಲಿ ಓದಿ, ಆ ಓದಿನ ಫಲವನ್ನು ಭಾರತ ದೇಶದ ಶೋಷಿತ ಸಮುದಾಯದ ಜನರಿಗೆ ಧಾರೆ ಎರೆದದ್ದು ನಮ್ಮೆಲ್ಲರಿಗೂ ತಿಳಿದ ಸಂಗತಿಯೇ ಆಗಿದೆ. ಗಾಂಧಿ ಮತ್ತು ಅಂಬೇಡ್ಕರ್ ಇವರಿಬ್ಬರೂ ಸಹ ಈ ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಪ್ರಯತ್ನ ಪಟ್ಟರಾದರು ಅಂಬೇಡ್ಕರ್ ಅವರ ರೀತಿ ಮತ್ತು ಗಾಂಧಿಯವರ ರೀತಿ ತುಂಬಾ ಭಿನ್ನವಾಗಿದೆ ಎಂದು ಹೇಳಿದರು.
ಸಾಹಿತಿ ಆನಂದ ಕುಮಾರ್ ಪ್ರತಿಕ್ರಿಯೆ ನೀಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ, ಪ್ರಬಂಧ, ಆಶುಭಾಷಣ, ಕವನ ವಾಚನ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಇದನ್ನೂ ಓದಿ: ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಶಿವಣ್ಣ, ಸಹಾಯಕ ಪ್ರಾಧ್ಯಾಪಕರಾದ ಡಾ.ಕೆ.ಜಯಲಕ್ಷಮ್ಮ, ಡಾ.ಪಿ.ಎನ್.ಮಧುಸೂದನ, ಹಲಸಂದಿ ಸತೀಶ, ಡಾ.ಟಿ.ಗಾಯಿತ್ರಮ್ಮ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

