By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    6 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    6 hours ago
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    15 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    15 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    5 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    5 hours ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    11 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    17 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    18 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    2 days ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    3 days ago
Reading: ಅಂಬೇಡ್ಕರ್ ಅವರದ್ದು ಸಾಮಾಜಿಕ ನ್ಯಾಯದ ದೃಷ್ಠಿಕೋನ | ಕೆ.ವಿ.ಪ್ರಭಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಂಬೇಡ್ಕರ್ ಅವರದ್ದು ಸಾಮಾಜಿಕ ನ್ಯಾಯದ ದೃಷ್ಠಿಕೋನ | ಕೆ.ವಿ.ಪ್ರಭಾಕರ್

News Desk Chitradurga News
Last updated: 30 August 2025 18:03
News Desk Chitradurga News
8 months ago
Share
“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ”ವಿಚಾರ ಸಂಕಿರಣ ಕಾರ್ಯಕ್ರಮ
SHARE

CHITRADURGA NEWS | 30 AUGUST 2025

ಚಿತ್ರದುರ್ಗ: ಸುದ್ದಿ ಮಾಧ್ಯಮದ ಆತ್ಮ ಆಗಿರುವ ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಇದೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಬಬ್ಬೂರುಫಾರಂ | ಜಿಲ್ಲೆಯ ರೈತರಿಗೆ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ

ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ, ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮøತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ವಿಷಾದ ವ್ಯಕ್ತಪಡಿಸಿದರು.

ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಶೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿ ಪಟ್ಟಣವೇ ಹೆಚ್ಚಾಗಿ ಕಂಡುಬರುತ್ತದೆ. ಕಡ್ಡಿ ಗೀರಿ ಬೆಂಕಿ ಹಚ್ಚುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ತಿಳಿಸಿದ ಅವರು, ಇವತ್ತಿನ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸೆಪ್ಟೆಂಬರ್ 3 ರಂದು ನಿಸಾರ್ ಅಹಮದ್ ಜಿಲ್ಲಾ ಪ್ರವಾಸ 

ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ “ಮೂಕಸಾಕ್ಷಿ”ಯಾಗಿದೆ ಎಂದು ಹೇಳಿದರು.

ಸಂವಿಧಾನದಿಂದ “ಜಾತ್ಯತೀತ ಮತ್ತು ಸಮಾಜವಾದ” ಎನ್ನುವ ಮೌಲ್ಯವನ್ನು ಕೀಳಬೇಕು ಎನ್ನುವ ಕೂಗಿನ ಹಿಂದೆ ಇರುವುದೂ ಕೂಡ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸುವ ವಿಕೃತ ಮನಸ್ಥಿತಿಯೇ ಆಗಿದೆ ಎಂದು ವಿಶ್ಲೇಷಿಸಿದರು.

ಒಂದು ಕಡೆ ಮಾಧ್ಯಮಗಳಲ್ಲಿ ದಲಿತ ಸಮುದಾಯದ ಪ್ರತಿನಿಧ್ಯವೇ ಇಲ್ಲ ಎನ್ನುವ ಅಧ್ಯಯನ ವರದಿಗಳು ಬಂದಿವೆ. ನಿರ್ಣಾಯಕ ಸ್ಥಾನಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಸುದ್ದಿ ಸಂಸ್ಥೆಗಳು ನಿಷೇಧ ಹೇರಿವೆ ಎನ್ನುವ ವರದಿಗಳೂ ಕೂಡ ಇವೆ. ಈ ತಾರತಮ್ಯ ಸುದ್ದಿಗಳ, ಸಂಗತಿಗಳ ಆಯ್ಕೆಯ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ ಪತ್ರಿಕೆಗಳನ್ನು ರೂಪಿಸುವ ಮತ್ತು ಸುದ್ದಿಗಳನ್ನು ಗ್ರಹಿಸುವುದರಲ್ಲಿ ಮತ್ತು ಮಂಡಿಸುವುದರಲ್ಲೂ ಅಂಬೇಡ್ಕರ್ ದೃಷ್ಟಿಕೋನ ಕಾಣೆಯಾಗಿದೆ. ಆದ್ದರಿಂದ ಅಂಬೇಡ್ಕರ್ ಅವರ ದೃಷ್ಟಿಕೋನದ ಮರುಸ್ಥಾಪನೆ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕಾಳಜಿಗಳ ಮರು ಶೋಧನೆ ಆಗುವ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ: ಅಲೆಮಾರಿ ಸಮುದಾಯಗಳಿಗೆ ಶೇ.1% ಮೀಸಲಾತಿ ನೀಡದಿದ್ದರೆ ಹೋರಾಟ

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ಪುಸ್ತಕದ ವಿಷಯವಾಗದೇ, ಬದುಕಿನ ವಿಷಯವಾಗಬೇಕು. ಬದುಕಿನ ಪ್ರತಿ ಹೆಜ್ಜೆಯಲ್ಲಿಯೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಪಾಲಿಸೋಣ ಎಂದು ಹೇಳಿದರು.

ದೇಶಕ್ಕೆ ಭದ್ರವಾದ ಅಡಿಪಾಯ ಭಾರತ ಸಂವಿಧಾನ. ಇಡೀ ವಿಶ್ವದ ಎರಡನೇ ದೊಡ್ಡ ಆರ್ಥಿಕ ಶಕ್ತಿಯಾಗಿ 2038ಕ್ಕೆ ಭಾರತ ಹೊರಹೊಮ್ಮಲಿದೆ ಎಂಬುದಾಗಿ ಬ್ರಿಟೀಷ್ ಸಂಸ್ಥೆ ಹೇಳಿದ್ದು, ಇದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನ ಸಮಾನತೆ ಎಂದು ಹೇಳಿದರು.

ಮಾಧ್ಯಮ ಸರ್ವಸ್ಪರ್ಶಿ, ಸರ್ವ ವ್ಯಾಪ್ತಿಯಾಗಿರುವ ಒಂದು ಕಾಯಕ. ಮಾಧ್ಯಮದಲ್ಲಿ ಬರುವ ವಿಷಯಗಳನ್ನು ಎಲ್ಲರೂ ಸಮಾನ ರೀತಿಯಲ್ಲಿ ಓದುವ ಹಾಗೂ ಅರ್ಥೈಸಿಕೊಳ್ಳುವ ಕೆಲಸ ಮಾಡಲಿದ್ದಾರೆ. ಹಾಗಾಗಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುವ ಇಚ್ಛೆ ಇರುವ ಯುವ ಪತ್ರಕರ್ತರು “ಸುದ್ದಿ ಮಾಧ್ಯಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ದೃಷ್ಠಿಕೋನ, ವಿಚಾರಧಾರೆಗಳನ್ನು ಸಾರ್ವಜನಿಕರಿಗೆ ಪ್ರಸ್ತುತ ಪಡಿಸುತ್ತಿದ್ದರು ಎಂಬ ಘಟನಾವಳಿಗಳ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ಪಡೆದು, ಜಿಲ್ಲೆಯ ಪತ್ರಕರ್ತರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಹೆಸರು ಗಳಿಸಿ, ಕೀರ್ತಿ ತರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಂಧ್ಯಾ ಕಿರಣ ಯೋಜನೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ | ರಾಜ್ಯಾಧ್ಯಕ್ಷ ಷಡಾಕ್ಷರಿ

 ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡಿ, ಬಾಬಾ ಸಾಹೇಬರು ಕೇವಲ ದಲಿತ ಸಮುದಾಯ ಮಾತ್ರವಲ್ಲ. ಎಲ್ಲ ವರ್ಗದ ಮಹಿಳೆಯರ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಚೇತನ. ದುಃಖಿತರ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಹೊಸ ದೇಶ, ಕನಸಿನ ಭಾರತ ದೂರದಲ್ಲೂ ಕಾಣದ ಪರಿಸ್ಥಿತಿ ಇದೆ. ಆರ್ಥಿಕ, ಸಾಮಾಜಿಕ ಸಮಾನತೆ ಇಲ್ಲದ ರಾಜಕೀಯ ಸಮಾನತೆ ಉಪಯೋಗವಿಲ್ಲ ಎಂದರು.

ಮಾಧ್ಯಮದಲ್ಲೂ ಮೇಲ್ಮಟ್ಟದಲ್ಲಿ ಸವರ್ಣೀಯರ ಸಂಖ್ಯೆ ಹೆಚ್ಚಿದೆ. ಪ್ರಮುಖ ಮಾಧ್ಯಮಗಳಲ್ಲಿ ದಲಿತ ಸಂಪಾದಕರು ಇದ್ದಾರಾ ಎಂಬುದನ್ನು ಹುಡುಕಬೇಕಿದೆ. ಜಾಹೀರಾತು ಇಲ್ಲದೆ ಪತ್ರಿಕೆ ನಡೆಯುವುದಿಲ್ಲ ಎಂಬುದು ಈಗಿನ ವಾದ. 

ಆದರೆ, ಅಂಬೇಡ್ಕರ್ ಸಮಾಜಮುಖಿ ಹೊರತುಪಡಿಸಿ ಉಳಿದವನ್ನು ಜಾಹೀರಾತಲ್ಲೂ ಪ್ರಕಟಿಸುತ್ತಿರಲಿಲ್ಲ. ಆಗಿನ ಸಂದರ್ಭದಲ್ಲಿ ಭೀಮಾಸುರ, ದೇಶದ್ರೋಹಿ ಇತ್ಯಾದಿಯಾಗಿ ಸವರ್ಣೀಯ ಪತ್ರಿಕೆಗಳು ಅವಮಾನಿಸಿದವು. ಈಗಲೂ ದಾಸ್ಯದಿಂದ ಹೊರ ಬರಲು ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ: ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ  

 ದಲಿತರಿಗೆ ಪ್ರತ್ಯೇಕ ಮತಕ್ಷೇತ್ರಗಳು ಸಿಗಬೇಕು. ಇಲ್ಲದಿದ್ದರೆ ದಲಿತರಿಗೆ ಪಾತಿನಿಧ್ಯಕ್ಕೆ ಅರ್ಥ ಇರುವುದಿಲ್ಲ. ದಲಿತ ಹಿತಾಸಕ್ತಿ ಕಾಪಾಡಲು ಸಾಧ್ಯವಿಲ್ಲ ಎಂದು ತಿಳಿಸಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪತ್ರಿಕೋದ್ಯಮದಲ್ಲಿ ಪ್ರತಿಪಾದಿಸಬೇಕು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಮಾಜಿಕ ನ್ಯಾಯದ ಕುರಿತು ಮಾತನಾಡುತ್ತೇವೆ. ಆದರೆ, ಅನುಷ್ಠಾನ ಪರಿಣಾಮವಾಗಿ ಆಗುತ್ತಿಲ್ಲ. ಅಂಬೇಡ್ಕರ್ ಚಿಂತನೆಯೊಂದಿಗೆ ಯುವ ಪತ್ರಕರ್ತರನ್ನು ಮತ್ತಷ್ಟು ಸಮಾಜಮುಖಿಯಾಗಿ ತೊಡಗುವಂತೆ ಮಾಡುವ ನಿಟ್ಟಿನಲ್ಲಿ ಅಕಾಡೆಮಿ ಕಾರ್ಯ ನಿರ್ವಹಿಸಲಿದೆ. 

ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕಾಡೆಮಿಗೆ ಉತ್ತಮ ಅನುದಾನ ನೀಡಿದ್ದಾರೆ. ಹೀಗಾಗಿ ಅಕಾಡೆಮಿ ವತಿಯಿಂದ ಪತ್ರಕರ್ತರಿಗಾಗಿ, ಯುವ ಪೀಳಿಗೆಗೆ ಅತ್ಯುತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗುತ್ತಿದೆ. ಪತ್ರಕರ್ತರು ಪ್ರಶ್ನಿಸುವ, ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಯುವ ಪತ್ರಕರ್ತರಿಗೆ ಸುದ್ದಿ ಮನೆಯ ಒಳಗೂ, ಹೊರಗೂ ಕಾರ್ಯನಿರ್ವಹಣೆ ಕುರಿತು ಹಿರಿಯರ ಮಾರ್ಗದರ್ಶನ ಅಗತ್ಯವಿದೆ ಎಂದರು.

ಇದನ್ನೂ ಓದಿ: ಯುವಕರಿಂದ ವಿನೂತನ ಪ್ರಯತ್ನ | ಸರ್ಕಾರಿ ಶಾಲೆ ರೀತಿಯಲ್ಲಿ ಗಣಪತಿ ಮಂಟಪ | ಇಲ್ಲಿ ಗಣೇಶನೇ ಮೇಸ್ಟ್ರು

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕರ್ನಾಟಕ ಎಸ್.ಸಿ, ಎಸ್.ಟಿ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಎಂ.ಸಹನಾ, ಸದಸ್ಯರಾದ ಎಂ.ಎನ್.ಅಹೋಬಳಪತಿ, ಕೆ.ನಿಂಗಜ್ಜ, ಮಂಜುನಾಥ್, ಡಾ.ಶಿವಕುಮಾರ್ ಕಣಸೋಗಿ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಸೇರಿದಂತೆ ಪತ್ರಕರ್ತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ambedkarAmbedkar DrishtikonaChitradurgaChitradurga newsKV PrabhakarNews MediaSymposiumಅಂಬೇಡ್ಕರ್ಅಂಬೇಡ್ಕರ್ ದೃಷ್ಠಿಕೋನಕೆ.ವಿ.ಪ್ರಭಾಕರ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ವಿಚಾರ ಸಂಕಿರಣಸುದ್ದಿ ಮಾಧ್ಯಮ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಆಗಸ್ಟ್ 30 | ಹತ್ತಿ ರೇಟ್ ಎಷ್ಟಿದೆ? 
Next Article ಧರ್ಮಪುರದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಮಂಜೂರಾತಿ | ಸಚಿವ ರಾಮಲಿಂಗಾ ರೆಡ್ಡಿ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
ಮುಖ್ಯ ಸುದ್ದಿ
ಉಚ್ಚಂಗಿಯಲ್ಲಮ್ಮ
ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up