
CHITRADURGA NEWS | 11 OCTOBER 2025
ಹೊಳಲ್ಕೆರೆ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವುದನ್ನು ಮನಗಂಡು ದೇಶದ ಪ್ರಧಾನಿ ನರೇಂದ್ರ ಮೋದಿ ಅಮೃತ ಜೀವನ ಯೋಜನೆ ಜಾರಿಗೆ ತಂದಿದ್ದಾರೆಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.
ಇದನ್ನೂ ಓದಿ: ವಿವಿ ಸಾಗರ ಜಲಾಶಯ ಕೊಡಿಗೆ ಕ್ಷಣ ಗಣನೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಪುರಸಭೆ ವತಿಯಿಂದ ಹೊಳಲ್ಕೆರೆ ಪಟ್ಟಣಕ್ಕೆ ಹಿರಿಯೂರಿನ ವಾಣಿವಿಲಾಸಸಾಗರ ಮೂಲದಿಂದ ಕುಡಿಯುವ ನೀರು ಸರಬರಾಜು ಉನ್ನತೀಕರಿಸುವ ಯೋಜನೆಗೆ ಶನಿವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ 21 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು. ಇದರಲ್ಲಿ ಅರ್ಧದಷ್ಟು ಹಣವನ್ನು ಕೇಂದ್ರ ನೀಡಲಿದೆ. ರಾಜ್ಯ ಸರ್ಕಾರ 40 ರಷ್ಟು ಹಣವನ್ನು ಕೊಡಬೇಕು. ಸ್ಥಳೀಯ ಸಂಸ್ಥೆಯಿಂದ ಶೇ.10 ರಷ್ಟು ಅನುದಾನ ಸಂಗ್ರಹಿಸಿ ಜನತೆಗೆ ಶುದ್ದ ಕುಡಿಯುವ ನೀರು ಪೂರೈಸಬೇಕಾಗುತ್ತದೆ.
ಜನಸಾಮಾನ್ಯರಿಗೆ ಯಾವುದೇ ರೀತಿಯ ರೋಗ ರುಜಿನಗಳು ಬರಬಾರದೆಂದರೆ ಶುದ್ದ ಕುಡಿಯುವ ನೀರು ಸಿಗಬೇಕೆನ್ನುವುದನ್ನು ಪ್ರಧಾನಿ ನರೇಂದ್ರಮೋದಿರವರು ಮನದಲ್ಲಿಟ್ಟುಕೊಂಡು ನಗರ ಪ್ರದೇಶದಲ್ಲಿ ಅಮೃತ ಯೋಜನೆ, ಗ್ರಾಮೀಣ ಪ್ರದೇಶಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಗೆ ತಂದಿದ್ದಾರೆಂದು ತಿಳಿಸಿದರು.
ಇದನ್ನೂ ಓದಿ: ನರೇಗಾ ಜಾಬ್ ಕಾರ್ಡ್ ಗೆ ಇ-ಕೆವೈಸಿ ಕಡ್ಡಾಯ | ಜಿ.ಪಂ. ಸಿಇಓ ಡಾ.ಆಕಾಶ್
ಮುಂದಿನ 30 ವರ್ಷಗಳ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಈ ಯೋಜನೆಯಡಿ ಪ್ರತಿನಿತ್ಯ ಒಬ್ಬ ವ್ಯಕ್ತಿಗೆ 70 ಲೀಟರ್‍ನಷ್ಟು ನೀರು ಕೊಡಲಾಗುವುದು. ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಹಾಗೂ ಪುರಸಭೆ ಜವಾಬ್ದಾರಿಯಿಂದ ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಯೋಜನೆ ಅನುಷ್ಟಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಹೊಳಲ್ಕೆರೆ ಪಟ್ಟಣದಲ್ಲಿ ಸೂಳೆಕೆರೆಯಿಂದ ಹದಿನೈದು ದಿನಕ್ಕೊಮ್ಮೆ ನೀರು ಬರುತ್ತಿದ್ದುದನ್ನು ಗಮನಿಸಿ ಅಮೃತ ಯೋಜನೆಯಡಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಪೈಪ್‍ಲೈನ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಳಗಳನ್ನು ಹಾಕಲಾಗಿದೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 11 | ಹತ್ತಿ ರೇಟ್ ಎಷ್ಟಿದೆ?
ಕೇಂದ್ರ ಸರ್ಕಾರದ ಯೋಜನೆಯಡಿ ಪಟ್ಟಣಕ್ಕೆ ನೀರು ಬರುತ್ತಿರುವುದು ಅತ್ಯಂತ ಖುಷಿಯ ವಿಚಾರ. ಇನ್ನು ಆರು ತಿಂಗಳೊಳಗೆ ಯೋಜನೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಸೂಚಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
