CHITRADURGA NEWS | 01 AUGUST 2024
ಚಿತ್ರದುರ್ಗ: ಆಂತರಿಕ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್(SupreemCourt) ಏಳು ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ ಸಂವಿಧಾನದ ಆಶಯಕ್ಕೆ ಇನ್ನಷ್ಟೂ ಬಲ ನೀಡಿದಂತಾಗಿದೆ.
ಇದನ್ನೂ ಓದಿ: ಮೂರು ತಿಂಗಳಲ್ಲಿ ಜಿಲ್ಲಾ–ತಾಲೂಕು ಪಂಚಾಯಿತಿ ಚುನಾವಣೆ | ಕೆ.ಎಸ್.ನವೀನ್
ಸುಪ್ರೀಂ ಕೋರ್ಟ್ನ ಏಳು ನ್ಯಾಯಾಧೀಶರ ಪೀಠವು ಚಿನ್ನಯ್ಯ ತೀರ್ಪನ್ನು ರದ್ದುಗೊಳಿಸಿದ್ದು, ದೇವೀಂದ್ರ ಸಿಂಗ್ ಪ್ರಕರಣದ ತೀರ್ಪನ್ನು ಎತ್ತಿಹಿಡಿದಿದೆ. ಅಂದರೆ, ಭಾರತದ ಸಂವಿಧಾನವು ಎಸ್‌ಸಿಗಳಲ್ಲಿ ಆಂತರಿಕ ಮೀಸಲಾತಿಯನ್ನು ಅನುಮತಿಸುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿರುವುದು ನಿಜಕ್ಕೂ ಹೆಮ್ಮೆ ಪಡುವ ಸಂಗತಿ.
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸಮರ್ಥನೀಯ ಎಂದು ಒಳಮೀಸಲಾತಿಪರ ತೀರ್ಪು ಪ್ರಕಟಿಸಿದ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಿಂದಾಗಿ 30 ವರ್ಷಗಳ ನಿರಂತರ ಹೋರಾಟಕ್ಕೆ ಜಯ ದೊರಕಿದೆ.
ಇದನ್ನೂ ಓದಿ: SP ಧರ್ಮೇಂದರ್ ಕುಮಾರ್ ಮೀನಾ ವರ್ಗಾವಣೆ | ಸಂಶೋಧನಾ ಸಂಸ್ಥೆಯ ವಿಜ್ಞಾನಿಯಾಗಿ ನೇಮಕ
ಈ ಕಾರ್ಯಕ್ಕೆ ಹೋರಾಟ ಕೈಗೊಂಡ ಪ್ರತಿಯೊಬ್ಬ ಹೋರಾಟಗಾರರನ್ನು ನಾನು ಈ ಸಂದರ್ಭದಲ್ಲಿ ನೆನೆಯುತ್ತೇನೆ ಎಂದು ಕಾರಜೋಳ ಹೇಳಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
