CHITRADURGA NEWS | 31 MARCH 2026
ಚಿತ್ರದುರ್ಗ: ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲು 05 ಆಗಸ್ಟ್ 2025 ರಂದು ಅಧಿಸೂಚನೆ ಹೊರಡಿಸಲಾಗಿತ್ತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಸಿದ್ದಪಡಿಸಲಾಗಿದೆ.
ಸದರಿ ಆಯ್ಕೆ ಪಟ್ಟಿಯನ್ನು ಎಲ್ಲಾ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ: ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಆಯಾ ತಾಲ್ಲೂಕು ಶಿಶು ಆಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
