
CHITRADURGA NEWS | 22 JULY 2024
ಚಿತ್ರದುರ್ಗ: ತಾಲ್ಲೂಕು ಮಾಡನಾಯಕನಹಳ್ಳಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಅವರು ಸೋಮವಾರದಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: Lok Sabha: ಲೋಕಸಭೆ ಅಧಿವೇಶನದಲ್ಲಿ ಕೇಂದ್ರೀಯ ವಿದ್ಯಾಲಯ ಸದ್ದು | ಮೊದಲ ದಿನ ಮೊದಲ ಪ್ರಶ್ನೆ ಕೇಳಿದ ಸಂಸದ ಗೋವಿಂದ ಎಂ.ಕಾರಜೋಳ
ಕರ್ನಾಟಕ ಉಚ್ಛ ನ್ಯಾಯಲಯ, ಬೆಂಗಳೂರು ಅವರು ರಿಟ್ ಅರ್ಜಿ ಸಂಖ್ಯೆ 38157/2011 ರನ್ವಯ ಚಿತ್ರದುರ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಭೇಟಿ ನೀಡಿ, ಅಲ್ಲಿನ ಕಟ್ಟಡ ಪರಿಸ್ಥಿತಿ ಹಾಗೂ ಪೌಷ್ಠಿಕ ಆಹಾರ ಪೂರೈಕೆ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿರುತ್ತಾರೆ.
ಅದರನ್ವಯ ನ್ಯಾ. ಎಂ. ವಿಜಯ್ ಅವರು ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮದ ಎ. ಬಿ ಮತ್ತು ಸಿ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಖಾಸಗಿ ಕಟ್ಟಡದಲ್ಲಿರುವ ಅಂಗನವಾಡಿಗೆ ನಿಯಮಾನುಸಾರ ಸೂಕ್ತ ಮೂಲಭೂತ ಸೌಕರ್ಯ ಒದಗಿಸಿಲ್ಲ, ಅಂಗನವಾಡಿ ಕೇಂದ್ರದ ಒಳಗೇ ಶೌಚಾಲಯ ನಿರ್ಮಿಸಿರುವುದು ಕೂಡ ಸರಿಯಾದುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: self death : ಪರೀಕ್ಷೆಯಲ್ಲಿ ಕಡಿಮೆ ಅಂಕ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ
ಅಲ್ಲದೆ ಗ್ರಾಮದ ಬಿ ಮತ್ತು ಸಿ ಅಂಗನವಾಡಿ ಕೇಂದ್ರದ ಕಟ್ಟಡಗಳು, ಅಂಗನವಾಡಿ ನಡೆಸಲು ಸುರಕ್ಷಿತ ಇರುವುದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇವರ ಗಮನಕ್ಕೆ ತರಲಾಗಿದೆ ಎಂಬುದಾಗಿ ನ್ಯಾ. ಎಂ. ವಿಜಯ್ ಅವರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
