
CHITRADURGA NEWS | 05 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 02 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 202 ಹಾಗೂ 09 ಅಂಗನವಾಡಿ ಸಹಾಯಕಿಯರ ಹುದ್ದೆ ಸಲ್ಲಿಸಿದ ಅರ್ಜಿಗಳ ಪೈಕಿ 107 ಅರ್ಜಿಗಳು ಅಪೂರ್ಣವಾಗಿವೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ | ಸಾಣೇಹಳ್ಳಿಯ ನಾಟಕೋತ್ಸವ ಸಮಾರಂಭದಲ್ಲಿ ಭಾಗೀ

ಇದೇ ಮಾದರಿಯಲ್ಲಿ ಭರಮಸಾಗರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 07 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 91 ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆ ಸಲ್ಲಿಸಿದ ಅರ್ಜಿಗಳ ಪೈಕಿ 25 ಅರ್ಜಿಗಳು ಅಪೂರ್ಣವಾಗಿವೆ.
ಈ ಹಿನ್ನಲೆಯಲ್ಲಿ ನ.13 ವರೆಗೆ ಈ ಅಪೂರ್ಣ ಅರ್ಜಿಗಳನ್ನು ವೆಬ್‍ಸೈಟ್ https://karnemakaone.kar.nic.in/abcd/ ನಲ್ಲಿ ಪೂರ್ಣಗೊಳಿಸಲು ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಅಭ್ಯರ್ಥಿಗಳು ಮೊದಲನೇ ಹಂತದಲ್ಲಿ ಅರ್ಜಿ ಮಾಹಿತಿ ತುಂಬಬೇಕು. ಎರಡನೇ ಹಂತದಲ್ಲಿ ಭಾವಚಿತ್ರ ಹಾಗೂ ಸಹಿ ಅಪ್‍ಲೋಡ್ ಮಾಡಬೇಕು. ಮೂರನೇ ಹಂತದಲ್ಲಿ ದಾಖಲಾತಿಗಳನ್ನು ಅಪ್‍ಲೋಡ್ ಮಾಡಬೇಕು.
ಇದನ್ನೂ ಓದಿ: ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ
ನಾಲ್ಕನೇ ಹಂತದಲ್ಲಿ ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.
ಆ.4 ರಂದು ಹೊರಡಿಸಿದ ಅಧಿಸೂಚನೆ ಕೊನೆಯ ದಿನಾಂಕಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮಾತ್ರ ಆಯ್ಕೆ ಸಂದರ್ಭದಲ್ಲಿ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
