CHITRADURGA NEWS | 03 APRIL 2026
ಚಿತ್ರದುರ್ಗ: ಚಳ್ಳಕೆರೆ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನಾವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು 05-08-2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ: ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
ಸದರಿ ಆಯ್ಕೆ ಪಟ್ಟಿಗಳಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ, ಚಳ್ಳಕೆರೆಗೆ ಸಂಬಂಧಿಸಿದಂತೆ ಚಳ್ಳಕೆರೆಯ ಚಿತ್ರದುರ್ಗ ರಸ್ತೆಯ ತ್ಯಾಗರಾಜ ನಗರದ, ಎಸ್.ಬಿ.ಐ. ಬ್ಯಾಂಕ್ ಪಕ್ಕದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಗೂ ಹೊಳಲ್ಕೆರೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪಟ್ಟಣದ ಎನ್.ಹೆಚ್.13 ರಸ್ತೆಯಲ್ಲಿನ ಹರಿಕೃಪ ಬಿಲ್ಡಿಂಗ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

