CHITRADURGA NEWS | 29 MARCH 2025
ಚಿತ್ರದುರ್ಗ: ಹಿರಿಯೂರು ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
Also Read: SSLC ಎಕ್ಸಾಮ್ | ಇಂದು ನಡೆದ ಸಮಾಜ ವಿಜ್ಞಾನ ವಿಷಯದಲ್ಲಿ ಗೈರಾದ ವಿದ್ಯಾರ್ಥಿಗಳು ಎಷ್ಟು?

ಮಾರ್ಚ್ 20 ರಂದು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆಗೆ ಅನುಮೋದಿಸಿದೆ.
ಹಿರಿಯೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಆಯ್ಕೆ ಪಟ್ಟಿಯನ್ನು ಹಿರಿಯೂರು ನಗರದ ಹಳಿಯಾರು ರಸ್ತೆಯ ಸ್ತ್ರೀ ಶಕ್ತಿ ಭವನ ಕಚೇರಿಯಲ್ಲಿ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಆಯ್ಕೆ ಪಟ್ಟಿಯನ್ನು ಹೊಳಲ್ಕೆರೆ ಪಟ್ಟಣದ ಎನ್.ಹೆಚ್.-13 ರಸ್ತೆಯ, ಹರಿಕೃಪ ಬಿಲ್ಡಿಂಗ್ನಲ್ಲಿರುವ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
Also Read: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 5 ಸಂಜೆ 5:30ರ ಒಳಗೆ ಸದರಿ ಕಚೇರಿಗಳಿಗೆ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
