CHITRADURGA NEWS | 30 SEPTEMBER 2026
ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯ ಹೌಸಿಂಗ್ ಬೋರ್ಡ್ ಕಾಲೋನಿಯ ಪಿ.ಎನ್.ಟಿ. ಕ್ವಾಟ್ರರ್ಸ್‌ನ ಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟದ ಪ್ರಯುಕ್ತ ಸಂಕಷ್ಟಹರ ಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಪೂಜಾ ಅಲಂಕಾರ ನೆರವೇರಿಸಲಾಯಿತು.
ಇದನ್ನೂ ಓದಿ: ಹ್ಯಾಂಡಲ್ ಬಿಟ್ಟು ಸ್ಟಂಟ್ ಮಾಡಿ ರೀಲ್ಸ್ ಮಾಡಿದವನ ವಿರುದ್ಧ ದೂರು ದಾಖಲು
ಅಂಗಾರಕ ಸಂಕಷ್ಟದ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಭಕ್ತರು ಶ್ರದ್ಧಾಭಕ್ತಿಯಿಂದ ಪೂಜಾನುಷ್ಠಾನದಲ್ಲಿ ಭಾಗವಹಿಸಿ ಮಹಾಗಣಪತಿಯ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಬೆನಕನ ಬಳಗದ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

