Connect with us

    HanumaJayanthi: ಬೆಲಗೂರು ಶ್ರೀ ಆಂಜನೇಯ ಸ್ವಾಮಿ ರಥೋತ್ಸವ

    Belaguru Rathothsava

    ಹೊಸದುರ್ಗ

    HanumaJayanthi: ಬೆಲಗೂರು ಶ್ರೀ ಆಂಜನೇಯ ಸ್ವಾಮಿ ರಥೋತ್ಸವ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 14 DECEMBER 2024

    ಹೊಸದುರ್ಗ: ತಾಲೂಕಿನ ಬೆಲಗೂರು ಶ್ರೀ ವೀರ ಪ್ರತಾಪ ಆಂಜನೇಯ ಸ್ವಾಮಿ ದೇಗುಲ ಸೇರಿದಂತೆ ಹೊಸದುರ್ಗ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಹನುಮ ಜಯಂತಿ ಆಚರಿಸಲಾಯಿತು.

    ಬೆಲಗೂರಿನ ಅವಧೂತ ಸದ್ಗುರು ಬಿಂಧು ಮಾಧವ ಶರ್ಮಾ ಅವರ ಅರಾಧ್ಯ ದೈವ ವೀರ ಪ್ರತಾಪ ಆಂಜನೇಯ ದೇಗುಲದಲ್ಲಿ ಹನುಮಜಯಂತಿ ಅಂಗವಾಗಿ ವಿಶೇಷ ಹೋಮ ಹವನ ಸೇರಿದಂತೆ ವಿಶೇಷ ಅಲಂಕಾರ ಮಾಡಲಾಗಿತ್ತು.

    ಇದನ್ನೂ ಓದಿ: ಒಂಟಿ ಮಹಿಳೆ ಮೇಲೆ ಅಟ್ಯಾಕ್ | ಚಿನ್ನದ ಸರ ಕಿತ್ತುಕೊಂಡು ಪರಾರಿ | ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ

    ಗುರುವಾರ ರಾತ್ರಿ ಲಕ್ಷ್ಮೀ ಕಲ್ಯಾಣೋತ್ಸವ ಹಾಗೂ ಸೀತಾ ಕಲ್ಯಾಣೋತ್ಸವ ನಡೆಸಲಾಯಿತು. ಶುಕ್ರವಾರ ಮಧ್ಯಾಹ್ನ ಸುಮಾರು 64 ಅಡಿ ಎತ್ತರದ 2 ಬೃಹತ್ ರಥಗಳಲ್ಲಿ ಲಕ್ಷ್ಮೀ ನಾರಾಯಣ ಹಾಗೂ ವೀರ ಪ್ರತಾಪ ಆಂಜನೇಯ ಸ್ವಾಮಿಯನ್ನು ಪ್ರತಿμÁ್ಠಪಿಸಿ ನೆರೆದಿದ್ದ ಸಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು.

    Belaguru Shri Anjaneyaswamy

    ಬೆಲಗೂರು ಶ್ರೀ ಆಂಜನೇಯ ಸ್ವಾಮಿ

    ನಂತರ ಪಾನಕದ ಗಾಡಿ ಸೇವೆ ಸೇರಿದಂತೆ ಪಾನಕ ಪಲ್ಲಾರದ ಸೇವೆ ವಸಂತ ಸೇವೆಗಳು ನಡೆದವು. ಬೆಂಗಳೂರು ಸೇರಿದಂತೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು.

    ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜಿನಿಂದ ಅರ್ಜಿ ಆಹ್ವಾನ | ಇಂದೇ ಕೊನೆ ದಿನ

    ಸೋಮಸಂದ್ರದ ಆಂಜನೇಯ ಸ್ವಾಮಿ ದೇಗುಲದಲ್ಲಿ ಶುಕ್ರವಾರ ಹನುಮ ಜಯಂತಿ ಅಂಗವಾಗಿ ಗರ್ಭಗುಡಿಯಲ್ಲಿರುವ ಬೃಹದಾಕಾರದ ಹನುಮನ ಮೂರ್ತಿಗೆ ಬೆಳ್ಳಿ ಕವಚವನ್ನು ಧರಿಸುವ ಮೂಲಕ ವಿಶೇಷ ಅಲಂಕಾರ ಮಾಡಲಾಗಿತ್ತು. ಈ ಜಾತ್ರ ಮಹೋತ್ಸವಕ್ಕೆ ಈ ಬಾಗದ ಗ್ರಾಮ ದೇವತೆ ಕೈನಡು ಕರಿಯಮ್ಮ ದೇವಿಯವರನ್ನು ಕರೆತರಲಾಗಿತ್ತು.

    ಅಲಂಕೃತ ರಥದಲ್ಲಿ ಆಂಜನೇಯ ಸ್ವಾಮಿ ಹಾಗೂ ಕರಿಯಮ್ಮ ದೇವಿಯವರನ್ನು ಪ್ರತಿμÁ್ಠಪಿಸಿ ರಥವನ್ನು ಭಕ್ತರು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಈ ಜಾತ್ರ ಮಹೋತ್ಸವದಲ್ಲಿ ಬ್ರಹ್ಮವಿದ್ಯಾನಗರದ ಭಗೀರಥ ಪೀಠದ ಪುರುμÉೂೀತ್ತಮಾನಂದ ಪುರಿ ಸ್ವಾಮೀಜಿ ಸೇರಿದಂತೆ ಬೆಂಗಳೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

    Click to comment

    Leave a Reply

    Your email address will not be published. Required fields are marked *

    More in ಹೊಸದುರ್ಗ

    To Top