
CHITRADURGA NEWS | 14 NOVEMBER 2025
ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 26ನೇ ವರ್ಷದ ಅನ್ನದಾನ ಕಾರ್ಯಕ್ರಮ ನ.16 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಯಾಗಲಿದೆ.
ಇದನ್ನೂ ಓದಿ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ | ಶಾಂತವೀರ ಶ್ರೀ ಸಂತಾಪ

ಈ ನಿಮಿತ್ತ ಭಾನುವಾರ ಬೆಳಿಗ್ಗೆ 11 ಗಂಟೆಗೆ ಗಣ ಹೋಮ, ನವ ಗ್ರಹ ಹೋಮ, ರುದ್ರ ಹೋಮ ಮಧ್ಯಾಹ್ನ 12:30ಕ್ಕೆ ಪೂರ್ಣಾವತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ವೇಳೆ ಬಿಜೆಪಿ ಮುಖಂಡರಾದ ಉಮೇಶ್ ಕಾರಜೋಳ, ಸೇವಾ ಸಮಿತಿ ಅಧ್ಯಕ್ಷ ಶರಣ್ ಕುಮಾರ್ ಉಪಸ್ಥಿತರಿರುವರು.
ಪ್ರತಿ ವರ್ಷದಂತೆ ಮಾಲೆ ಧರಿಸಿದ ಅಯ್ಯಪ್ಪ ಭಕ್ತರಿಗೆ ನ.16 ರಿಂದ ಜನವರಿ 13 ರವರೆಗೆ 60 ದಿನಗಳ ಕಾಲ ಪ್ರತಿನಿತ್ಯ ಉಚಿತ ಅನ್ನದಾನ ನಡೆಯಲಿದೆ. ನ.16 ರಿಂದ 21ರವರೆಗೆ 26ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ.
ನ.20 ಗುರುವಾರ ಸಂಜೆ 7ಕ್ಕೆ ಅಯ್ಯಪ್ಪ ಸ್ವಾಮಿ ಪಡಿಪೂಜೆ, ಡಿಸೆಂಬರ್ 28 ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ಮಹಾ ಅನ್ನದಾನ ಕಾರ್ಯಕ್ರಮ, ಜನವರಿ 13 ಮಂಗಳವಾರ ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಆಭರಣ ಮೆರವಣಿಗೆ ಜನವರಿ 14 ಬುಧವಾರ ಸಂಜೆ 6 ಗಂಟೆಗೆ ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಲಕ್ಷ ದೀಪೋತ್ಸವ ನೆರವೇರಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 14 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಲು ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಹಾಗೂ ಬೆಟ್ಟದ ಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
