
CHITRADURGA NEWS | 16 NOVEMBER 2025
ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 26ನೇ ವರ್ಷದ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಸದ ಗೋವಿಂದ ಕಾರಜೋಳ ಅನ್ನದಾನ ಕಾರ್ಯಕ್ರಮ ಉದ್ಘಾಟಿಸಿದರು.
ಅನ್ನದಾನ ಕಾರ್ಯಕ್ರಮದ ಅಂಗವಾಗಿ ಗಣಹೋಮ, ನವಗ್ರಹ ಹೋಮ, ರುದ್ರ ಹೋಮ ಸೇರಿದಂತೆ ವಿಶೇಷ ಪೂಜೆ ಮಾಡಲಾಯಿತು.

ಇದನ್ನೂ ಓದಿ: ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಎಸ್.ವರಲಕ್ಷ್ಮಿ ಆಯ್ಕೆ
ಮಲಾಧಾರಿಗಳಿಗೆ ನ. 16 ರಿಂದಜನವರಿ 13 ರವರೆಗೆ 60 ದಿನಗಳ ಕಾಲ ಪ್ರತಿನಿತ್ಯ ಅನ್ನದಾನ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್‌ಆರ್‌ಎಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್.ಆರ್.ಲಿಂಗಾರೆಡ್ಡಿ, ಮೆದೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿರಂಜನ್, ನ್ಯಾಯವಾದಿ ಫಾತ್ಯರಾಜನ್, ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ.ಮುರಳಿ, ಹೊಸದುರ್ಗದ ಅಯ್ಯಪ್ಪ ಸ್ವಾಮಿ ಗುರುಗಳಾದ ಸೈಯದ್, ಉದ್ಯಮಿಗಳಾದ ಮಹಾಂತೇಶ್, ಅರುಣ್ ಕುಮಾರ್, ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
