
CHITRADURGA NEWS | 08 JUNE 2024
ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆಯ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭವನ್ನು ಜೂನ್ 9 ಮತ್ತು 10ರಂದು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ಇಳಿಕೆ ಕಂಡ ರಾಶಿ ಅಡಿಕೆ ಬೆಲೆ

ಜೂನ್ 9ರಂದು ಬೆಳಿಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವರಣ, ಪಂಚಗವ್ಯ ಹವನ, ಕ್ಷಿಪ್ರ ಪ್ರಸಾ ಮಹಾಗಣಪತಿಗೆ ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ, ಮಹಾಭಿಷೇಕ ಪೂಜಾದಿಗಳು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.
ಸಂಜೆ 6.30 ರಿಂದ ರಾಕ್ಷೋಘ್ನ ಹೋಮ ನಡೆಯಲಿದೆ. ಸಂಜೆ 7 ಗಂಟೆಗೆ ಗಂಜಿಗಟ್ಟೆ ಆರ್.ಕೃಷ್ಣಮೂರ್ತಿ ಮತ್ತು ಸಂಗಡಿಗರಿಂದ ಜಾನಪದ, ಭಕ್ತಿಗೀತೆ, ಲಾವಣಿ ಹಾಗೂ ಶರಣರ ವಿಚಾರಧಾರೆ ತದನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಗೋವಿಂದ ಕಾರಜೋಳ
ಜೂನ್ 10ರಂದು ಬೆಳಿಗ್ಗೆ 8 ರಿಂದ ಶ್ರೀ ಕ್ಷಿಪ್ತ ಪ್ರಸಾದ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ ಹಾಗೂ ನವಗ್ರಹ ಪುರಸ್ಸರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ಮಧ್ಯಾಹ್ನ 12.30 ರಿಂದ ಅಷ್ಟಾವಧಾನ ಮಹಾಮಂಗಳಾರತಿ ನಂತರ ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಧವಳಗಿರಿ ಬಡಾವಣೆಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ.
ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ 9880466192, 9449145416 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
