
CHITRADURGA NEWS | 29 MAY 2026
ಮೊಳಕಾಲ್ಮೂರು: ಒಂದೇ ದಿನದ ಅಂತರದಲ್ಲಿ ಮೊಳಕಾಲ್ಮೂರು ತಾಲೂಕಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಚಳ್ಳಕೆರೆ ಮೂಲದ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಲಾರಿಗೆ ಕಾರು ಅಪ್ಪಳಿಸಿದ್ದು, ಕಾರಿನಲ್ಲಿದ್ದ ಐವರು ಅಸುನೀಗಿದ್ದಾರೆ.
ಇದನ್ನೂ ಓದಿ:ವಸತಿ ಯೋಜನೆಗೆ ಅರ್ಜಿ ಆಹ್ವಾನ
ತುಮಕೂರ್ಲಹಳ್ಳಿ ಶ್ರೀನಿವಾಸ ಡಾಬಾ ಸಮೀಪ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ.
ಕಾರಿ ಚಾಲಕ ರಘು(40) ಚಳ್ಳಕೆರೆ ಟೌನ್, ರುದ್ರೇಶ (36) ಚಳ್ಳಕೆರೆ ಟೌನ್, ಚಳ್ಳಕೆರೆ ಕೌನ್ಸಿಲರ್ ಪ್ರಮೋದ(35), ಸೋಮಶೇಖರ(35) ವೀರದಿಮ್ಮನಹಳ್ಳಿ ಚಳ್ಳಕೆರೆ ತಾಲ್ಲೂಕ್ ಹಾಗೂ ಮಲ್ಲಿಕಾರ್ಜುನ ಚಳ್ಳಕೆರೆ ಟೌನ್ ಮೃತರು.
ಇದನ್ನೂ ಓದಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
ಜಿಲ್ಲೆಯಲ್ಲಿ ಎರಡು ದಿನಗಳಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಜನರನ್ನು ಬಲಿ ಪಡೆಯಲಾಗಿದೆ.

ಅದೂ ಕೂಡಾ ಮೊಳಕಾಲ್ಮೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150 ರಲ್ಲೇ ಈ ಅವಘಡಗಳು ಸಂಭವಿಸಿದ್ದು, ಆತಂಕಕ್ಕೀಡು ಮಾಡಿದೆ.
ಇದನ್ನೂ ಓದಿ:ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
ಬುಧವಾರ ಸಂಜೆ ಭೈರಾಪುರ ಬಳಿ ನಿಂತಿದ್ದ ಲಾರಿಗೆ ಮಿನಿ ಟ್ರಕ್ ಡಿಕ್ಕಿಯಾಗಿ ಮಕ್ಕಳು ಸಹಿತ ಐದು ಜನ ಮೃತಪಟ್ಟಿದ್ದರು. ಇದಾದ ಒಂದೇ ದಿನದ ಅಂತರದಲ್ಲಿ ತುಮಕೂರ್ಲಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಚಳ್ಳಕೆರೆಯ ಐವರು ಮೃತಪಟ್ಟಿದ್ದಾರೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಸಾವು ನೋವಿನ ಪ್ರಮಾಣವೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

