
CHITRADURGA NEWS | 15 SEPTEMBER 2025
ಮೊಳಕಾಲ್ಮೂರು: ಜಿಲ್ಲೆಯಲ್ಲಿ ಹಾದು ಹೋಗಿರುವ ಹೆದ್ದಾರಿಗೆ ಪದೇ ಪದೇ ವನ್ಯಮೃಗಗಳು ಬಲಿಯಾಗುತ್ತಿವೆ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ ಪರಿಣಾಮ ಕರಡಿ, ಚಿರತೆ ಸೇರಿದಂತೆ ಹಲವು ಪ್ರಾಣಿಗಳು ವಾಹನಗಳಿಗೆ ಸಿಲುಕಿ ಸಾಯುತ್ತಿವೆ.
ಮೊಳಕಾಲ್ಮೂರು ತಾಲೂಕಿನ ಹಾನಗಲ್ ಬಳಿ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿಯಾಗಿ ಸ್ಥಳದಲ್ಲೇ ಕರಡಿ ಮೃತಪಟ್ಟಿರುವ ಘಟನೆ ಸೆ.14 ಭಾನುವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: ಅಣಬೆ ಬೇಸಾಯ ಕುರಿತು ತರಬೇತಿ | 50 ಜನ ರೈತರಿಗೆ ಅಹ್ವಾನ
ಬೀದರ್-ಶ್ರೀರಂಗಪಟ್ಟಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಘಟನೆ ನಡೆದಿದ್ದು, ಅಂದಾಜು 4 ವರ್ಷದ ಕರಡಿ ಮೃತಪಟ್ಟಿದೆ.
ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಹೆದ್ದಾರಿಯಲ್ಲಿ ಪ್ರಾಣಿಗಳು ರಸ್ತೆ ದಾಟಲು ಸರಿಯಾದ ಅಂಡರ್‌ಪಾಸ್ ಬಿಡದ ಕಾರಣ ಈ ರೀತಿಯ ಘಟನೆಗಳು ಮರುಕಳಿಸುತ್ತಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
