CHITRADURGA NEWS | 11 JUNE 2026
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬೆಲಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ಸಹಜ ಕೃಷಿ ಕುರಿತು ತರಬೇತಿ ಕಾರ್ಯಗಾರ
ದಂತ ವೈದ್ಯಧಿಕಾರಿ ಡಾ.ಸುಮಾ ಅವರು, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ನಿಕೋಟಿನ್ ಗಮ್ ಬಳಸುವ ಮಾಹಿತಿಯನ್ನು ಮತ್ತು ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿಯನ್ನು ಸಮುದಾಯದ ಜನರಿಗೆ ತಿಳಿಸಿದರು. ಬಿಎಚ್‍ಇಒ ಲಲಿತಮ್ಮ ಅವರು ಮಲೇರಿಯಾ ರೋಗದ ಲಕ್ಷಣಗಳು ತಡೆಗಟ್ಟುವ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸಹನಾ, ಎಸ್‍ಪಿಹೆಚ್‍ಸಿಒ ನಿರ್ಮಲ ಹಾಗೂ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
