
CHITRADURGA NEWS | 18 JULY 2025
ಚಿತ್ರದುರ್ಗ: ಕರ್ತವ್ಯ ಲೋಪ ಹಾಗೂ ಹಣ ದುರುಪಯೋಗವೆಸಗಿರುವ ಹೊಸದುರ್ಗ ತಾಲ್ಲೂಕು ಮಲ್ಲಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಉಮಾದೇವಿಯನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಬಂಜಾರ(ಲಂಬಾಣಿ) ಸಮಾಜದಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: ಟಾಟಾಏಸ್ ಹರಿದು ಮೂರು ವರ್ಷದ ಮಗು ಮೃತ | ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯಲ್ಲಿ ಘಟನೆ
ವರ್ಗ-1 ರ ಹಣ ವಸೂಲಿ ಮಾಡಿ ಮೂರು ತಿಂಗಳ ನಂತರ ಬ್ಯಾಂಕ್‍ಗೆ ಜಮಾ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು. ಮಾರ್ಗಸೂಚಿ ಪ್ರಕಾರ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವಾಸಿಸಬೇಕು. ಚಿತ್ರದುರ್ಗದಿಂದ ದಿನವೂ ಪ್ರಯಾಣ ಮಾಡುತ್ತಿದ್ದಾರೆ.
ದಿನಾಂಕ : 15-2-2025 ರಂದು ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸದೆ ಬಂಜಾರ ಸಮಾಜವನ್ನು ಅಗೌರವಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಜೆಸಿಬಿ ಯಿಂದ ಕೆಲಸ ಮಾಡಿಸಿರುವುದರಿಂದ ಬಡವರಿಗೆ ಉದ್ಯೋಗವಿಲ್ಲದಂತಾಗಿದೆ.
ಪಂಚಾಯಿತಿ ಅಧ್ಯಕ್ಷರ ಗಮನಕ್ಕೆ ತಾರದೆ ಅನಗತ್ಯ ವಿಚಾರಗಳನ್ನು ರೆಸೆಲ್ಯೂಷನ್ ಬುಕ್‍ನಲ್ಲಿ ಬರೆದು ಅಧ್ಯಕ್ಷರಿಗೆ ಬೆದರಿಕೆ ಹಾಕಿ ಸಹಿ ಮಾಡಿಸಿಕೊಂಡಿರುವ ಅಭಿವೃದ್ದಿ ಅಧಿಕಾರಿ ಉಮಾದೇವಿಯನ್ನು ಅಮಾನತ್ತುಗೊಳಿಸುವಂತೆ ಈ ಹಿಂದೆ ಸಾಕಷ್ಟು ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ.
ತಕ್ಷಣವೇ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಉಮಾದೇವಿಯನ್ನು ಅಮಾನತ್ತು ಪಡಿಸಬೇಕು. ಇಲ್ಲವಾದಲ್ಲಿ ಬಂಜಾರ ಸಮಾಜದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ | ಜುಲೈ 21ರಂದು ಕೌನ್ಸಿಲಿಂಗ್
ಈ ವೇಳೆ ಪ್ರವೀಣ್‍ನಾಯ್ಕ, ಕೃಷ್ಣನಾಯ್ಕ, ಕಲ್ಲೇಶ್, ಧನ್ಯಕುಮಾರ್, ಶಂಕರ್ ನಾಯ್ಕ್ ಸೇರಿದಂತೆ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
