
CHITRADURGA NEWS | 30 JUNE 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಚರಿಸುವ ಎಕ್ಸ್‍ಪ್ರೆಸ್ ರೈಲುಗಳ ನಿಲುಗಡೆ ಮಾಡಿಸುವಂತೆ ನೂತನ ಸಂಸದರಾದ ಗೋವಿಂದ ಕಾರಜೋಳ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ.
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿರುವ ಗೋವಿಂದ ಕಾರಜೋಳ, ಹೊಸದುರ್ಗ ತಾಲೂಕಿನ ಹೊಸದುರ್ಗ ರೋಡ್ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೊಸದುರ್ಗ ತಾಲೂಕಿನ ಜನತೆ ಪ್ರತಿ ದಿನ ರೈಲು ಸೌಲಭ್ಯ ಬಳಸಿಕೊಳ್ಳುತ್ತಿದ್ದು, ಎಕ್ಸ್‍ಪ್ರೆಸ್ ರೈಲುಗಳು ಇಲ್ಲಿ ನಿಲುಗಡೆ ಮಾಡದಿರುವುದರಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಆದ್ದರಿಂದ ಇಲ್ಲಿ ಸಂಚರಿಸುವ ಕೆಳಕಂಡ ರೈಲುಗಳನ್ನು ನಿಲುಗಡೆ ಮಾಡುವತೆ ಮನವಿ ಮಾಡಿದ್ದಾರೆ.
ಎಷ್ಟು ರೈಲುಗಳ ನಿಲುಗಡೆಗೆ ಮನವಿ:
- ವಾಸ್ಕೊ ಡಾ ಗಾಮ – ಯಶವಂತಪುರ ಡೈಲಿ ಎಕ್ಸ್‍ಪ್ರೆಸ್.
- ಯಶವಂತಪುರ ಜಂಕ್ಷನ್ – ವಾಸ್ಕೋ ಡ ಗಾಮ ಡೈಲಿ.
- ಬೆಳಗಾವಿ – ಮೈಸೂರು ವಿಶ್ವಮಾನವ ಡೈಲಿ ಎಕ್ಸ್‍ಪ್ರೆಸ್.
- ಮೈಸೂರು – ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‍ಪ್ರೆಸ್.
- ಚಾಲುಕ್ಯ ಎಕ್ಸ್‍ಪ್ರೆಸ್ ಹಾಗೂ ಗೋಲಗುಂಬಜ್ ಎಕ್ಸ್‍ಪ್ರೆಸ್.
ಇದನ್ನೂ ಓದಿ: ರಾಜವೀರ ಮದಕರಿ ನಾಯಕರ 270ನೇ ಪಟ್ಟಾಭಿಷೇಕ
ಇಷ್ಟು ರೈಲುಗಳನ್ನು ಹೊಸದುರ್ಗ ರೋಡ್ ಬಳಿ ನಿಲುಗಡೆ ಮಾಡಲು ಮನವಿ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
