ಚಿತ್ರದುರ್ಗ ನ್ಯೂಸ್.ಕಾಂ: ನಗರದಲ್ಲಿ ಜಿಲ್ಲಾಡಳಿತದಿಂದ ನವೆಂಬರ್ 30 ರಂದು ಕನಕ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಗರಸಭೆ ಸದಸ್ಯೆ ಹಾಗೂ ಜಿಲ್ಲಾ ಕುರುಬರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಹೊಳಲ್ಕೆರೆ ರಸ್ತೆಯಲ್ಲಿರುವ ಕನಕದಾಸರ ವೃತ್ತದಿಂದ ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಯಲಿದ್ದು, ಸಮಾಜದ ಎಲ್ಲ ಮಹಿಳೆಯರೂ ಈ ಮೆರವಣಿಗೆಯಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಕರೆ ಕೊಟ್ಟರು.
ಇದನ್ನೂ ಓದಿ: ಮೊಲದ ವೇಗದ ಬರಕ್ಕೆ: ಆಮೆ ವೇಗದ ಪರಿಹಾರ
ಅಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟಿಸುವರು. ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ತಿಳಿಸಿದರು.
ನಮ್ಮದೇ ಸಮಾಜದ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಮಹಿಳಾ ಸಬಲೀಕರಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಈ ಬಗ್ಗೆ ಎಲ್ಲ ಮಹಿಳೆಯರು ಮಾಹಿತಿ ಪಡೆದು ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಬಲರಾಗಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.
ಸುದ್ದಿಗೋಷ್ಟಿಯಲ್ಲಿ ಸರೋಜ, ಶಾಂತ, ಶೋಭಾ, ನಾಗೇಶ್, ನಾಗಭೂಷಣ್, ಲೀಮಾವತಿ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
