
CHITRADURGA NEWS | 27 AUGUST 2024
ಹಿರಿಯೂರು: (Hiriyuru) ತಾಲ್ಲೂಕಿನ ಕಸಬ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿಯಾಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.

ಇದನ್ನೂ ಓದಿ: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ
ಅರ್ಹತೆಗಳು: ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು ಪೂರ್ಣಗೊಂಡಿರಬೇಕು.
ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸುವುದು. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸುವುದು.
ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಲಾರಿಗೆ ಡಿಕ್ಕಿ
ಕೆಳಮಟ್ಟದ ನೌಕರರ ವಂಶಸ್ಥರೆAಬುವ ಬಗ್ಗೆ ದಾಖಲೆ ಲಗತ್ತಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು.
ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
