CHITRADURGA NEWS | 19 MAY 2026
ಚಿತ್ರದುರ್ಗ: ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು, ಡಾ.ಎಪಿಜೆ ಅಬ್ದುಲ್ ಕಲಾಂ, ಮೌಲನಾ ಆಜಾದ್ ಪದವಿಪೂರ್ವ ಕಾಲೇಜುಗಳಿಗೆ ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 22 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘದ ಚುನಾವಣೆ | ನಿರ್ದೇಶಕರಾಗಿ 15 ಜನ ಆಯ್ಕೆ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಸೇವಾಸಿಂಧು ವೆಬ್‍ಸೈಟ್ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
