ಪಾಲಿಟೆಕ್ನಿಕ್ ಕಾಲೇಜುಗಳಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ

apply now

CHITRADURGA NEWS | 08 MAY 2025

ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಭ್ಯವಿರುವ ಹಾಗೂ ರಾಜ್ಯದ ಆಯ್ದ 30 ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಮತ್ತು 13 ಖಾಸಗಿ ಪಾಲಿಟೆಕ್ನಿಕ್‍ಗಳಲ್ಲಿ ಲಭ್ಯವಿರುವ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ನಾನ್ ಇಂಟರ್ ಆಕ್ಟೀವ್ ಕೌನ್ಸೆಲಿಂಗ್ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ (ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ) ಅರ್ಜಿ ಅಹ್ವಾನಿಸಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

Also Read: ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಸಕ್ತ ಅಭ್ಯರ್ಥಿಗಳು ಮೇ. 5 ರಿಂದ ಮೇ.15 ರವರಗೆ www.dtek.karnatak.gov.in ವೆಬ್‍ಸೈಟ್ ಮೂಲಕ ಅರ್ಜಿ ಹಾಗೂ ಮಾಹಿತಿ ಪುಸ್ತಕ ಪಡೆಯಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಮೇ.15 ರಂದು ಸಂಜೆ 5.30 ಗಂಟೆ ಒಳಗೆ ಪೂರಕ ದಾಖಲೆಗಳೊಂದಿಗೆ ಸಂಸ್ಥೆಯ ಕಂಪ್ಯೂಟರ್ ವಿಭಾಗದಲ್ಲಿ ಸಲ್ಲಿಸಿ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ದಾಖಲಿಸಿಕೊಂಡು, ಕೋರ್ಸುಗಳ ಅದ್ಯತಾ ಪಟ್ಟಿಯನ್ನು ದಾಖಲಿಸಿ ಸ್ವೀಕೃತಿ ಪಡೆಯಬೇಕು.

ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಮೇ. 15 ರಂದು ಸಂಜೆ 6 ಗಂಟೆಯ ನಂತರ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ ಮಾಡಲಾಗುವುದು. ಮೇ.16 ರಂದು ಮೆರಿಟ್ ಪಟ್ಟಿಗೆ ಆಕ್ಷೇಪಣೆ ಮತ್ತು ತಿದ್ದುಪಡಿ ನಡೆಸಲಾಗುವುದು.

Also Read: ಆಪರೇಷನ್ ಸಿಂಧೂರ | ಪಾಕಿಸ್ತಾನಕ್ಕೆ ತಕ್ಕ ಉತ್ತರ | ಕೆ.ಎಸ್.ನವೀನ್

ಮೇ.17 ಸಂಜೆ 5.30 ಗಂಟೆಯ ನಂತರ ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ ಮಾಡಲಾಗುವುದು. ಮೇ.21 ರಂದು ಸಂಜೆ 5.30 ಗಂಟೆಯ ನಂತರ ಸೀಟು ಹಂಚಿಕೆ ಮಾಡಲಾಗುವುದು. ಮೇ. 22 ರಿಂದ ಮೇ. 23 ರವರಗೆ ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ನಿಗದಿತ ಶುಲ್ಕದೊಂದಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುವುದು.

ಮೇ.24 ರಿಂದ ಮೇ.31 ರವರಗೆ ಸೀಟು ಹಂಚಿಕೆಯಾದ ನಂತರ ಭರ್ತಿ ಆಗದೆ ಉಳಿದ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿಯೇ ಆಪ್‍ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುವುದು ಎಂದು ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಆರ್.ರಾಘವೇಂದ್ರಚಾರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version