CHITRADURGA NEWS | 12 SEPTEMBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನ. ವಿದ್ಯಾರ್ಥಿಗಳು https:shp.karnataka.gov.in/bcwd ಅನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ಅನ್ನು ನೋಡಬಹುದು.
ಇದನ್ನೂ ಓದಿ: POP ಗಣೇಶ ನಿಷೇಧಿಸಿ | ನಮ್ಮ ಪರಂಪರೆಯಂತೆ ಮಣ್ಣಿನ ಗಣಪ ಪ್ರತಿಷ್ಠಾಪಿಸಿ | ಶಾಂತವೀರ ಶ್ರೀ
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004, 8050770005 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
