CHITRADURGA NEWS | 04 OCTOBER 2026
ಚಿತ್ರದುರ್ಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
ಈ ಮೊದಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಈ ಕಾಲಾವಕಾಶ ವಿಸ್ತರಿಸಲಾಗಿದೆ.
ಈ ದಿನಾಂಕ ವಿಸ್ತರಣೆಯು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ, ಉಪ್ಪಾರ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಮಡಿವಾಳ ಮಾಚಿದೇವ, ಮರಾಠ, ಒಕ್ಕಲಿಗ, ಅಲೆಮಾರಿ ಮತ್ತು ಅರೆಅಲೆಮಾರಿ, ಕಾಡುಗೊಲ್ಲ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಅನ್ವಯಿಸಲಿದೆ.
ಇದನ್ನೂ ಓದಿ: 2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳು ಈ ಅವಧಿ ವಿಸ್ತರಣೆ ಸಮಯಾವಕಾಶ ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

