ಚಿತ್ರದುರ್ಗ ನ್ಯೂಸ್.ಕಾಂ: ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ದಿಗಾಗಿ 2023-24ನೇ ಸಾಲಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯೋಜನೆಗಳಲ್ಲಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ.
ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು, ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ನಾಡದೊರೆ ಮದಕರಿ ನಾಯಕರ ಅದ್ದೂರಿ ಜಯಂತ್ಯುತ್ಸವ | ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್
ಒಂದು ಕಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ, ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ. ಸಂಪತ್‍ಕುಮಾರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
