
CHITRADURGA NEWS | 04 NOVEMBER 2025
ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ಕ್ರಿಶ್ಚಿಯನ್ ಸಮುದಾಯ ಹೊರತು ಪಡಿಸಿ ಇತರೆ ಅಲ್ಪಸಂಖ್ಯಾತ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರಿವು ಸಾಲ ನವೀಕರಣಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ | ಸಾಣೇಹಳ್ಳಿಯ ನಾಟಕೋತ್ಸವ ಸಮಾರಂಭದಲ್ಲಿ ಭಾಗೀ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್ ಮೂಲಕ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ವಾಸ್ತುಶಿಲ್ಪ, ಎಂಬಿಎ, ಎಂಸಿಎ, ಎಲ್‍ಎಲ್‍ಬಿ, ತೋಟಗಾರಿಕೆ, ಕೃಷಿ ವಿಜ್ಞಾನ, ಡೈರಿ ಟೆಕ್ನಾಲಜಿ, ಅರಣ್ಯ, ಪಶುವೈದ್ಯಕೀಯ, ಫಿಶರೀಸ್, ರೇಷ್ಮೇ, ನ್ಯೂಟ್ರಿಷಿಯನ್ ಮತ್ತು ಡೈಯಟ್, ಬಿ ಫಾರ್ಮಾ, ಎಂ ಫಾರ್ಮಾ, ಡಿ ಫಾರ್ಮಾ ಆಯ್ಕೆಯಾದಂತಹ ವಿದ್ಯಾರ್ಥಿಗಳು ಈ ಹಿಂದೆ ಪಡೆದಿರುವ ಸಾಲದ ಮೊತ್ತ ಶೇ.12% ರಷ್ಟು ಮೊತ್ತ ಪಾವತಿಸಬೇಕು.
ಇದರ ಆಧಾರದ ಮೇಲೆ ಅರಿವು ಸಾಲವನ್ನು ನವೀಕರಿಸಲಾಗುವುದು. ಇದುವರೆಗೂ ಅರಿವು ಸಾಲ ಪಡೆದ ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಡಿಸೆಂಬರ್ 13 ರಂದು ಲೋಕ ಅದಾಲತ್ | ಮಧ್ಯಸ್ಥಿಕೆ ಅಭಿಯಾನದಲ್ಲಿ 71 ಪಕ್ರರಣಗಳ ವಿಲೇವಾರಿ | ನ್ಯಾ.ರೋಣ ವಾಸುದೇವ
ಆಸಕ್ತರು ಸಂಬಂಧಪಟ್ಟ ಎಲ್ಲಾ ದಾಖಲೆಗಳ ಸಹಿತ ಕೆ.ಎಂ.ಡಿ.ಸಿ ವೆಬ್ ಸೈಟ್ https://kmdconline.karnataka.gov.in ಮುಖಾಂತರ ಡಿ.03ರ ಒಳಗೆ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
