CHITRADURGA NEWS | 24 SEPTEMBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆದೇಹಳ್ಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು, ದೇವರಕೊಟ್ಟ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜು, ಕುಂಚಿಗನಾಳ್‍ನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿಪೂರ್ವ ಕಾಲೇಜು, ಚಳ್ಳಕೆರೆ, ಹಿರಿಯೂರುನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 6,7,8,9 ಮತ್ತು 11ನೇ ತರಗತಿಯ ವಿದ್ಯಾರ್ಥಿನಿಯರಿಗೆ 6 ತಿಂಗಳ ಕರಾಟೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಅರ್ಹ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಜೀವನ ಆಧಾರಿತ ವಸ್ತು ಪ್ರದರ್ಶನ | ಸಂಸದ ಗೋವಿಂದ ಕಾರಜೋಳ ಉದ್ಘಾಟನೆ
ಅಕ್ಟೋಬರ್ 06 ಅರ್ಜಿ ಸಲ್ಲಿಸಲು ಕೊನೆಯ ದಿನ. ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಶ್ರೀರಾಮ ಕಾಂಪ್ಲೆಕ್ಸ್ 01ನೇ ಮಹಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ನಮೂನೆಗಳನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅಭ್ಯರ್ಥಿಯು ಸಾಮಾನ್ಯ ಪದವಿ ಪ್ರಮಾಣ ಪತ್ರ ಸಲ್ಲಿಸುವುದು. ನುರಿತ ಮಹಿಳಾ ತರಬೇತಿದಾರರಾಗಿರಬೇಕು. ಅಂಗೀಕೃತ ಸಂಸ್ಥೆಯಿಂದ ಬ್ಲಾಕ್ ಬೆಲ್ಟ್ ಪಡೆದಿರಬೇಕು.
ಅಂಗೀಕೃತ ಸಂಸ್ಥೆಯಿಂದ ಮಾಸ್ಟರ್ ಕಾರ್ಡ್, ಗುರುತಿನ ಚೀಟಿಯನ್ನು ಪಡೆದಿರಬೇಕು. ಕರಾಟೆ ತರಬೇತಿಯಲ್ಲಿ ಸೇವಾ ಅನುಭವ ಪ್ರಮಾಣಪತ್ರ ಸಲ್ಲಿಸುವುದು.
ಇದನ್ನೂ ಓದಿ: ಶಿಕ್ಷಕರ ಸೇವಾ ಮನೋಭಾವ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪ | ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ 08194-235134 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
