
CHITRADURGA NEWS | 06 NOVEMBER 2025
ಚಿತ್ರದುರ್ಗ: ಉಮಾ ವೀರಭದ್ರಯ್ಯ ಸ್ಮರಣಾರ್ಥ 2024-25ನೇ ಸಾಲಿಗೆ ನೀಡುವ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಲ್ಲಿ ತೊಡಗಿಸಿಕೊಂಡರುವ ಜಿಲ್ಲೆಯ ಅತ್ಯುತ್ತಮ ರೈತ ಮಹಿಳಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 4 ರಂದು ನಗರದ ಎಪಿಎಂಸಿ ಆವರಣದಲ್ಲಿನ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಐಎಟಿ ಕಾರ್ಯದರ್ಶಿ ಜಿ.ಟಿ.ವೀರಭದ್ರ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಗಿನ್ನೀಸ್ ರೆಕಾರ್ಡ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ ಪುತ್ರಿ ಸರಸ್ವತಿ
ನವೆಂಬರ್ 6 ರಿಂದ 17 ರವರೆಗೆ ಅರ್ಜಿ ಪಡೆದುಕೊಂಡು ಎಪಿಎಂಸಿ ಆವರಣದ ಇ ಬ್ಲಾಕ್‌ನಲ್ಲಿರುವ ಪ್ರಾದೇಶಿಕ ಕೃಷಿ ತಂತ್ರಜ್ಞರ ಸಂಸ್ಥೆಗೆ ಸಲ್ಲಿಸಬೇಕು. ಮೊ.9845678862 ಅಥವಾ 974255666 ಸಂಪರ್ಕಿಸಬಹುದು.
ಈ ಹಿಂದೆ ಕುಟುಂಬದ ಸದಸ್ಯರು ಈ ರೀತಿಯ ಪ್ರಶಸ್ತಿ ಪಡೆದುಕೊಂಡಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 06 | ಹತ್ತಿ ರೇಟ್ ಎಷ್ಟಿದೆ?
ಆಯ್ಕೆಯಾದ ರೈತ ಮಹಿಳೆಗೆ ಪ್ರಶಸ್ತಿ ಜೊತೆಗೆ ಹತ್ತು ಸಾವಿರ ರೂ. ಚೆಕ್ ಮೂಲಕ ನೀಡಲಾಗುವುದು.
ಅರ್ಜಿದಾರರು ಸಮಗ್ರ ಕೃಷಿ ಪದ್ಧತಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರಬೇಕು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಇತ್ತೀಚಿನ ಎರಡು ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು.
ಇದನ್ನೂ ಓದಿ: ಅಡಿಕೆ ಧಾರಣೆ | 6 ನವೆಂಬರ್ | ಯಾವ ಅಡಿಕೆಗೆ ಎಷ್ಟು ರೇಟ್
ಸಮಗ್ರ ಕೃಷಿ ಪದ್ಧತಿ ಅನುಸರಿಸುತ್ತಿರುವ ಕುರಿತು ಗುಣಮಟ್ಟದ ಭಾವಚಿತ್ರ ಲಗತ್ತಿಸಬೇಕು ಎಂದು ನಿಬಂಧನೆ ವಿಧಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
