ಮುಖ್ಯ ಸುದ್ದಿ
ಐಟಿಐ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

CHITRADURGA NEWS | 11 JUNE 2024
ಚಿತ್ರದುರ್ಗ: 2024-25ನೇ ಸಾಲಿಗೆ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಐಟಿಐ, ಪಿಯುಸಿ (ತಾಂತ್ರಿಕ ವಿಷಯದಲ್ಲಿ) ಉತ್ತೀರ್ಣರಾದ ವಿದ್ಯಾರ್ಥಿಗಳಿಂದ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೊಮಾಗೆ ಲ್ಯಾಟರಲ್ ಎಂಟ್ರಿ ಸ್ಕೀಂನಡಿಯಲ್ಲಿ ಆಫ್‍ಲೈನ್ ಮುಖಾಂತರ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪೊಲೀಸ್ ತನಿಖೆಗೆ ಕೈ ಜೋಡಿಸುತ್ತಿದ್ದ ಅಗಸ್ತ್ಯ ಇನ್ನಿಲ್ಲ
ಆಸಕ್ತ ಅಭ್ಯರ್ಥಿಗಳು www.dtek.kar.nic.in ತಂತ್ರಾಂಶದ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ, ಸಾಮಾನ್ಯ ಅಭ್ಯರ್ಥಿಗಳು ರೂ.100 ಹಾಗೂ ಎಸ್.ಸಿ, ಎಸ್.ಟಿ, ಪ್ರ.ವರ್ಗ-1 ರ ಅಭ್ಯರ್ಥಿಗಳು ರೂ.50 ಶುಲ್ಕದೊಂದಿಗೆ ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗೆ ಸಲ್ಲಿಸಬೇಕು.
ಇದನ್ನೂ ಓದಿ: ಜೆಇಇ ಫಲಿತಾಂಶ | ರಾಷ್ಟ್ರಮಟ್ಟದಲ್ಲಿ ಚಿತ್ರದುರ್ಗದ SRS ಪಿಯು ವಿದ್ಯಾರ್ಥಿಗಳ ಸಾಧನೆ
ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 26ರಂದು ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
